ಚಿತ್ರದುರ್ಗ: ಬಸವ ಕಲ್ಯಾಣದಲ್ಲಿ ಅಕ್ಟೋಬರ್ 1 ಮತ್ತು 2ರಂದು 21ನೇ ಕಲ್ಯಾಣ ಪರ್ವ ಉತ್ಸವ ಆಚರಿಸಲಾಗುತ್ತದೆ ಎಂದು ಬೆಂಗಳೂರಿನಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷಡಾ. ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.

‘ಲಿಂಗೈಕ್ಯ ಮಾತೆ ಮಹಾದೇವಿಯವರ ಮಾರ್ಗದರ್ಶನದಂತೆ 20 ಕಲ್ಯಾಣ ಪರ್ವಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಚರಿಸಿಕೊಂಡು ಬಂದಿದ್ದೇವೆ’ ಎಂದುಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘1988ರಲ್ಲಿ ಲಿಂಗಾನಂದ ಸ್ವಾಮೀಜಿ ಅವರಿಂದ ಬೀದರ್‌ನಲ್ಲಿ ಇಷ್ಟಲಿಂಗ ದೀಕ್ಷೆ ಪಡೆದು ಕಾರ್ಯಕರ್ತನಾಗಿ ದುಡಿದು ರಾಷ್ಟ್ರೀಯ ಬಸವದಳವನ್ನು 35 ವರ್ಷಗಳಿಂದ ಕಟ್ಟಿ ಬೆಳೆಸಿದ್ದೇನೆ. ನನ್ನ ತ್ಯಾಗ ಮತ್ತು ನಿಸ್ವಾರ್ಥ ಸೇವೆ ಗುರುತಿಸಿ ಮಾತೆ ಮಹಾದೇವಿ ರಾಷ್ಟ್ರೀಯ ಬಸವದಳ ಕೇಂದ್ರ ಸಮಿತಿ ಅಧ್ಯಕ್ಷ ಸ್ಥಾನ ನೀಡಿದ್ದರು’ ಎಂದು ತಿಳಿಸಿದರು.

ಪ್ರಭುಲಿಂಗ ಸ್ವಾಮೀಜಿ, ರಾಷ್ಟ್ರೀಯ ಬಸವದಳದ ರಾಜ್ಯ ಘಟಕದ ಅಧ್ಯಕ್ಷ ಕೆ. ವೀರೇಶ್‌ಕುಮಾರ್, ಮುಖಂಡರಾದ ಧೂಳಪ್ಪ ಸೊರಳ್ಳಿ, ಕಲ್ಮೇಶ್ ಲಿಂಗಾಯತ್, ಆರ್. ಶ್ರೀನಿವಾಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.