ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟಿರುವ ಮೂವರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ₹ 5 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗಿದೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಲಾಗಿದೆ. ಮೃತರಾದ ಮಂಜುಳಾ, ರಘು ಮತ್ತು ಪ್ರವೀಣ್ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ಪಾವತಿಗೆ ಆದೇಶಿಸಲಾಗಿದೆ’ ಎಂದು ಮುಖ್ಯಮಂತ್ರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ಮನವಿ ಹಾಗೂ ಜಿಲ್ಲಾಧಿಕಾರಿ ಸಲ್ಲಿಸಿದ ವರದಿ ಆಧರಿಸಿ ಪರಿಹಾರ ಪಾವತಿಗೆ ಆದೇಶಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.