ಹಿರಿಯೂರು: ತಾಲ್ಲೂಕಿನಲ್ಲಿ ಡಿಸೆಂಬರ್ 27ರಿಂದ ಜನವರಿ 11ರವರೆಗೆ ಕುಷ್ಟರೋಗ ಪ್ರಕರಣ ಪತ್ತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಹಶೀಲ್ದಾರ್ ರಾಜೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಅಭಿಯಾನದಲ್ಲಿ ಎಲ್ಲಾ ಆಶಾ ಕಾರ್ಯಕರ್ತೆಯರು ಮತ್ತು ಸ್ವಯಂಸೇವಕರು ಶಂಕಿತ ಕುಷ್ಟರೋಗ ಪ್ರಕರಣಗಳನ್ನು ಪತ್ತೆ ಹಚ್ಚಲಿದ್ದಾರೆ. 51 ಮೇಲ್ವಿಚಾರಕರ ನೇತೃತ್ವದಲ್ಲಿ ಒಟ್ಟು 274 ಸಮೀಕ್ಷಾ ತಂಡಗಳನ್ನು ನಿಯೋಜಿಸಲಾಗಿದೆ. ಈ ತಂಡಗಳು ಕುಷ್ಟರೋಗದ ಬಗ್ಗೆ ಜಾಗೃತಿ ಮೂಡಿಸಲಿದ್ದು, ಎಲ್ಲ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.