ಚಿತ್ರದುರ್ಗ: ಕೇಂದ್ರ ಸರ್ಕಾರ ಅನಗತ್ಯವಾಗಿ ಮೂಗು ತೂರಿಸುವುದು ಸರಿಯಲ್ಲ. ಯಡಿಯೂರಪ್ಪ ಅವರು ಅವಧಿ ಪೂರ್ಣಗೊಳಿಸಲು ಬಿಡಬೇಕು ಎಂದು ಸಾಣೇಹಳ್ಳಿಯ ತರಳಬಾಳು ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಒತ್ತಾಯ ಮಾಡಿದರು.

ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ ಅವರು, ಯಾವುದೇ ಸರ್ಕಾರಕ್ಕೆ ಪೂರ್ಣ ಸ್ವಾತಂತ್ರ್ಯವಿದ್ದಾಗ ಉತ್ತಮ ಆಡಳಿತ ನೀಡಲು ಸಾಧ್ಯ. ಕೇಂದ್ರ ಸರ್ಕಾರ ಹತೋಟಿ ಸಾಧಿಸುವ ಸಂಚು ಮಾಡಿದಂತೆ ಕಾಣುತ್ತಿದೆ. ಯಡಿಯೂರಪ್ಪ ಅವರ ಕೈ ಕಟ್ಟಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದ್ದಾರೆ.

ಉತ್ತಮ ಆಡಳಿತಕ್ಕೆ ಎಲ್ಲರ ಸಹಕಾರ ಮುಖ್ಯ. ಯಾವುದೇ ಪಕ್ಷದ ವ್ಯಕ್ತಿ ಕನಿಷ್ಠ ಐದು ವರ್ಷ ಮುಂದುವರಿದರೆ ಒಳ್ಳೆಯ ಆಡಳಿತ ನಡೆಸಲು ಸಾಧ್ಯ. ಕೇಂದ್ರ, ರಾಜ್ಯದ ಪ್ರತಿನಿಧಿಗಳು ಸಿಎಂಗೆ ಸಂಪೂರ್ಣ ಸ್ವತಂತ್ರ್ಯ ನೀಡಬೇಕು. ಒಳ್ಳೆಯ ಆಡಳಿತ ನಡೆಸಲು ಅವಕಾಶ ಕಲ್ಪಿಸಬೇಕು. ಆಡಳಿತದಲ್ಲಿ ದೋಷ ಕಂಡರೆ ಆಗ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ವರ್ಷ, ಎರಡು ವರ್ಷಕ್ಕೆ ಮುಖ್ಯಮಂತ್ರಿ ಬದಲಿಸಬಾರದು. ಸಿಎಂ ಬದಲಾವಣೆಯಿಂದ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲು ಸಾಧ್ಯ ಆಗುವುದಿಲ್ಲ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಲಿ. ಯಡಿಯೂರಪ್ಪ ಅವರಿಗೆ ಪೂರ್ಣಾವಧಿ ಕೆಲಸ ಮಾಡಲು ಬಿಡಬೇಕು ಎಂದು ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ಓದಿ... ಮೈತ್ರಿ ಸರ್ಕಾರ ಕೆಡವಿತೇ ಪೆಗಾಸಸ್?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.