ಎಲ್ಲ ಹಂತದ ಅಧಿಕಾರಿಗಳು ಕಚೇರಿಯಿಂದ ಹೊರ ಬಂದು ಜನರ ನಡುವೆ ಕೆಲಸ ಮಾಡಬೇಕು. ಆಗ ಮಾತ್ರ ಅಭಿವೃದ್ಧಿ ಸಾಧ್ಯ. ನಿಮ್ಮ ನಿರ್ಲಕ್ಷ್ಯದಿಂದ ಅನುದಾನ ವ್ಯರ್ಥವಾದರೆ ಯಾರು ಜವಾಬ್ದಾರಿ. ಇದರಲ್ಲಿ ನಾವು ಅಪರಾಧಿಗಳಾಗುತ್ತೇವೆ.
ಎ.ನಾರಾಯಣಸ್ವಾಮಿ ಕೇಂದ್ರ ಸಚಿವ
ರಾಜಕೀಯ ನಿರಾಸಕ್ತಿ ಮೂಡಿದೆ
ನೀವು ಮಾಡುತ್ತಿರುವ ಕೆಲಸ ನೋಡಿ ಸಾಕಾಗಿದೆ. ಒಂದು ಚಿಕ್ಕ ಮಾಹಿತಿ ಇಲ್ಲದೆ ಸಭೆಗೆ ಬರುತ್ತೀರ. ನಿಮ್ಮ ವರ್ತನೆಯಿಂದ ನನಗೆ ರಾಜಕೀಯದಲ್ಲೇ ನಿರಾಸಕ್ತಿ ಮೂಡಿದೆ’ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು. ಸಂಸದರ ಆದರ್ಶ ಗ್ರಾಮಗಳ ಕುರಿತು ಸಚಿವರು ಕೇಳಿದ ಮಾಹಿತಿಯನ್ನು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಸರಿಯಾಗಿ ನೀಡಲಿಲ್ಲ. ‘ನಿಮ್ಮ ಈ ರೀತಿಯ ವರ್ತನೆ ಜಿಲ್ಲಾಡಳಿತಕ್ಕೆ ಮಾತ್ರ ಅಲ್ಲ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯಿತಿ ಸಿಇಒ ಸಚಿವರು ಸಂಸದರು ಎಲ್ಲರಿಗೂ ಜನ ಬೆರಳಿಟ್ಟು ಮಾತನಾಡುವಂತೆ ಆಗುತ್ತದೆ’ ಎಂದು ಗರಂ ಆದರು.