ಚಿತ್ರದುರ್ಗ: ನಗರದ ಬಸವೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿ ಮನೋಜ್ (22) ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

‘ನನಗೆ ಓದು ಆಗುತ್ತಿಲ್ಲ, ನನ್ನ ಸಾವಿಗೆ ನಾನೇ ಕಾರಣ’ ಎಂದು ಪತ್ರ ಬರೆದಿಟ್ಟು ಮನೋಜ್ ನೇಣು ಹಾಕಿಕೊಂಡಿದ್ದಾನೆ.

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ಕತ್ರಘಟ್ಟ ಗ್ರಾಮದ ಮನೋಜ್ ಕಾಲೇಜಿನ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದ. ಓದಿನಲ್ಲಿ ಮುಂದಿದ್ದ ಮನೋಜ್ ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆಯುವಲ್ಲಿ ಯಶಸ್ವಿಯಾಗಿದ್ದ.

ಬುಧವಾರ ರಾತ್ರಿ ಊಟವಾದ ನಂತರ ಕೊಠಡಿಗೆ ತೆರಳಿ ಮಲಗಿದ್ದ. ಒಬ್ಬರಿಗೆ ಒಂದು ಕೊಠಡಿ ನೀಡಿದ್ದ ಕಾರಣ ಅವನ ಜೊತೆ ಬೇರೆ ಯಾರೂ ಇರಲಿಲ್ಲ. ಕಾಲೇಜು ಹಾಗೂ ಹಾಸ್ಟೆಲ್ನಲ್ಲಿ ಅವರು ಯಾರ ಜೊತೆಗೂ ಮಾತನಾಡುತ್ತಿರಲಿಲ್ಲ. ಆತ್ಮಹತ್ಯೆಗೆ ಖಿನ್ನತೆ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.