ಚಿತ್ರದುರ್ಗ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿದ ಘಟನೆ ಹೊಸದುರ್ಗ ತಾಲ್ಲೂಕಿನ ನಾಗನಾಯಕನ ಕಟ್ಟೆ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಹೊಸದುರ್ಗ ತಾಲ್ಲೂಕಿನ ನಾಗನಾಯಕನಕಟ್ಟೆ ಗ್ರಾಮದ ಮನೋಜ್ (21) ಕೊಲೆಯಾದ ಯುವಕ. ಹಿರಿಯೂರು ತಾಲ್ಲೂಕಿನ ಸೋಮೇನಹಳ್ಳಿ ತಾಂಡಾದ ರಘು ಕೊಲೆ ಮಾಡಿದ್ದು, ತಲೆಮರೆಸಿಕೊಂಡಿದ್ದಾನೆ.

ರಘು ಮತ್ತು ಮನೋಜ್ ನಡುವೆ ಹಳೆ ವೈಷಮ್ಯವಿತ್ತು ಎನ್ನಲಾಗಿದೆ. ನಾಗನಾಯಕನಕಟ್ಟೆಯಲ್ಲಿ ಗುರುವಾರ ರಾತ್ರಿ ಊರ ಹಬ್ಬ ನಡೆಯುತ್ತಿದ್ದಾಗ ಐವರು ಸಹಚರರೊಂದಿಗೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಮನೋಜ್ ಅವರನ್ನು ಹೊಸದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಶ್ರೀರಾಂಪುರ ಠಾಣೆಯ ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಇನ್‌ಸ್ಪೆಕ್ಟರ್ ಮಧು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.