ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಎರಡನೇ ಅರೋಪಿಯಾಗಿರುವ ಹಾಸ್ಟೆಲ್ ವಾರ್ಡನ್ನನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದರು. ವಿಚಾರಣೆ ಪೂರ್ಣಗೊಳಿಸಿದ ಬಳಿಕ ತನಿಖಾಧಿಕಾರಿಗಳು ಬಂಧನದ ನಿರ್ಧಾರ ಕೈಗೊಂಡರು.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪ್ರಕರಣದಲ್ಲಿ ಹಾಸ್ಟೆಲ್ ವಾರ್ಡನ್ ಎರಡನೇ ಆರೋಪಿ. ದೌರ್ಜನ್ಯಕ್ಕೆ ಹಾಸ್ಟೆಲ್ ವಾರ್ಡನ್ ಸಹಕರಿಸುತ್ತಿದ್ದರು ಎಂದು ಇಬ್ಬರು ಬಾಲಕಿಯರು ದೂರಿನಲ್ಲಿ ಆರೋಪಿಸಿದ್ದರು.

ಮತ್ತೊಂದು ಪ್ರಕರಣದಲ್ಲಿ ದೂರುದಾರರಾಗಿರುವ ವಾರ್ಡನ್ ಗುರುವಾರ ನ್ಯಾಯಾಲಯಕ್ಕೆ ಹೇಳಿಕೆ ದಾಖಲಿಸಲು ಬಂದಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದರು. ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತನಿಖಾ ತಂಡ ಆರೋಪಿಯನ್ನು ವಿಚಾರಣೆ ನಡೆಸಿ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಕಲ್ಪಿಸಿತ್ತು. ಪ್ರಕರಣದ ಮೊದಲ ಆರೋಪಿ ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ರಾತ್ರಿ ಬಂಧಿಸಲಾಗಿತ್ತು.

ಮುರುಘಾ ಶರಣರಿಗೆ ಹೃದಯ ಸಂಬಂಧಿ ಸಮಸ್ಯೆ: ಜಯದೇವಗೆ ಸ್ಥಳಾಂತರಿಸಲು ನಿರ್ಧಾರ

ಶುಕ್ರವಾರ ಮತ್ತೆ ಆರೋಪಿಯನ್ನು ತನಿಖಾ ತಂಡ ವಿಚಾರಣೆಗೆ ಒಳಪಡಿಸಿತು. ವಿಚಾರಣೆ ಪೂರ್ಣಗೊಂಡ ಬಳಿಕ ಬಂಧಿಸಲಾಯಿತು. ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳನ್ನು ಬಂಧಿಸಬೇಕಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.