ನಾಯಕನಹಟ್ಟಿ: ಹೋಬಳಿಯ ನೇರಲಗುಂಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯಾಗಿ ದುರುಗಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

15 ಜನ ಸದಸ್ಯ ಬಲವಿರುವ ನೇರಲಗುಂಟೆ ಗ್ರಾಮ ಪಂಚಾಯಿತಿಯಲ್ಲಿ ಈಚೆಗೆ ಉಪಾಧ್ಯಕ್ಷ ಸ್ಥಾನ ಖಾಲಿಯಾಗಿತ್ತು. ಈ ಸ್ಥಾನವು ಪರಿಶಿಷ್ಟಜಾತಿ ಮಹಿಳೆಗೆ ಮೀಸಲಾಗಿತ್ತು. ಗುರುವಾರ ನಡೆದ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ದುರುಗಮ್ಮ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದರು. ಆದರೆ, ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಎಚ್.ಶಶಿಧರ್ ಅವರು ದುರುಗಮ್ಮ ಅವರ ಅವಿರೋಧ ಆಯ್ಕೆ ಘೋಷಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.