ಮೊಳಕಾಲ್ಮುರು: ಮಹಿಳೆಯರು ಸಂಘಟಿತರಾದಲ್ಲಿ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ರಾಂಪುರದಲ್ಲಿ ವೀರಶೈವ ಲಿಂಗಾಯತ ಸಮಾಜವು ಮಂಗಳವಾರ ಹಮ್ಮಿಕೊಂಡಿದ್ದ ಕಿತ್ತೂರುರಾಣಿ ಚನ್ನಮ್ಮನ 200ನೇ ವಿಜಯೋತ್ಸವ, ಸಮಾಜದ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಮತ್ತು ಸಮಾಜದ ಹಲವು ನೂತನ ಘಟಕಗಳ ಉದ್ಘಾಟನಾ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.

ಹೆಚ್ಚುತ್ತಿರುವ ಪೈಪೋಟಿ ಯುಗದಲ್ಲಿ ಸಮಾಜದ ಮಹಿಳೆಯರು ಸ್ವಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡುವ ಜತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಮುಂದಾಗಬೇಕು. ಸಮಾಜದ ಸಂಘಟನಾ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಶಾಸಕ ಎನ್.ವೈ. ಗೋಪಾಲಕೃಷ್ಣ ಮಾತನಾಡಿದರು. ನಿವೃತ್ತ ನ್ಯಾಯಾಧೀಶರಾದ ರಾಂಪುರ ಮೂಲದ ಎ.ಜೆ.ಗಂಗಾಧರ್ ಅವರನ್ನು ಸನ್ಮಾನಿಸಲಾಯಿತು. ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಜೆ. ಜಯಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಘಟಕದ ಅಧ್ಯಕ್ಷ ಸೋಮನಗೌಡ ಎಂ. ಮಾಲೀಪಾಟೀಲ್, ಮಾಜಿ ಅಧ್ಯಕ್ಷ ಬಸವರಾಜ್ ದಿಂಡೂರ್, ಸದಸ್ಯ ಎಚ್.ಪಿ. ಪರಮೇಶ್ವರಪ್ಪ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವಸಂತ ಹುಲ್ಲತ್ತಿ, ಉಪಾಧ್ಯಕ್ಷೆ ಆಶಾ ಕಲ್ಲಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಜೆ. ಶಿವಪ್ರಕಾಶ್, ಉಪಾಧ್ಯಕ್ಷರಾದ ಕಮಲಾ, ಕಾರ್ಯದರ್ಶಿ ಎಂ.ಕೆ.ಧನಂಜಯ, ಚಳ್ಳಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಟಿ.ಶಿವಕುಮಾರ್, ಹೊಸದುರ್ಗ ತಾಲ್ಲೂಕು ಘಟಕದ ಅಧ್ಯಕ್ಷ ದಯಾನಂದ್, ಸ್ಥಳೀಯ ಮುಖಂಡರಾದ ಜಿ.ಸಿ.ನಾಗರಾಜ್, ಸಿದ್ದಮ್ಮ, ಶ್ರುತಿ, ಮೋಹನ್, ಜಿ.ಬಿ.ರಮೇಶ್, ಜಿ.ಬಿ.ಕುಮಾರ್, ಬಳೆ ಗಂಗಾಧರ್, ನಾಗಸಮುದ್ರ ಸುಧಾಕರ್, ಪ್ರಭಾಕರ್, ಉಮಾಶಂಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.