‘ಭಾರತ ಬಯಲು ಶೌಚಮುಕ್ತ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಆದರೆ, ರಾಜ್ಯದಲ್ಲಿ ಈಗಲೂ ನಸುಕಿನಲ್ಲೇ ಕೈಯಲ್ಲಿ ತಂಬಿಗೆ ಹಿಡಿದು ಮಹಿಳೆಯುರು, ಪುರುಷರು, ಮಕ್ಕಳು ಬಯಲ ಕಡೆಗೆ ಹೋಗುವುದು ಮಾಮೂಲಿ ದೃಶ್ಯ. ಸರ್ಕಾರದ ದಾಖಲೆಗಳಲ್ಲಿ ಮಾತ್ರ ಬಯಲು ಶೌಚಮುಕ್ತವಾಗಿದೆ. ಈ ಕುರಿತು ‘ಪ್ರಜಾವಾಣಿ’ ಇಲ್ಲಿ ಬೆಳಕು ಚೆಲ್ಲಿದೆ.

ಚಿತ್ರದುರ್ಗ: ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣವಾಗಿರುವ ಬಹುತೇಕ ಶೌಚಾಲಯಗಳು ನೀರಿನ ಕೊರತೆಯಿಂದ ಅನ್ಯ ಉದ್ದೇಶಕ್ಕೆ ಬಳಕೆಯಾಗುತ್ತಿವೆ. ಕೃಷಿ ಸಲಕರಣೆ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಶೌಚಾಲಯದಲ್ಲಿ ಸಂಗ್ರಹಿಸಿ ಇಡಲಾಗುತ್ತಿದೆ.

* ಇದನ್ನೂ ಓದಿ:ಹುಬ್ಬಳ್ಳಿ: ಶೌಚಕ್ಕಾಗಿ ಕತ್ತಲಾಗುವ ತನಕ ಕಾಯುವ ದುಸ್ಥಿತಿ

ಮೊಳಕಾಲ್ಮುರು, ಚಿತ್ರದುರ್ಗ, ಚಳ್ಳಕೆರೆ ಹಾಗೂ ಹಿರಿಯೂರು ತಾಲ್ಲೂಕಿನಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಬಹುತೇಕ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಚೊಂಬು ಹಿಡಿದು ಬಯಲಿಗೆ ಹೋಗುವುದನ್ನು ಜನರು ಬಿಡುತ್ತಿಲ್ಲ. ಮೊಳಕಾಲ್ಮುರು ತಾಲ್ಲೂಕಿನ ಹಿರೆಕೆರೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳವಾರಹಳ್ಳಿ, ಹೊಸಹಳ್ಳಿಗಳಲ್ಲಿ ಶೌಚಾಲಯ ಇದ್ದರೂ ಬಳಕೆಯಾಗುತ್ತಿಲ್ಲ. ಶೌಚಾಲಯದಲ್ಲಿ ಕುಳಿತುಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದಾರೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಅರಿವು ಮೂಡಿಸಿದರೂ ಜನರ ರೂಢಿಯನ್ನು ತಪ್ಪಿಸಲು ಸಾಧ್ಯವಾಗಿಲ್ಲ.

* ಇದನ್ನೂ ಓದಿ:ಶಿವಮೊಗ್ಗ:ಬೈಪಾಸ್ ಶೌಚಾಲಯ!

ಚಿತ್ರದುರ್ಗ ತಾಲ್ಲೂಕಿನ ಓಬಣ್ಣನಹಳ್ಳಿಯ ನೂರಕ್ಕೂ ಹೆಚ್ಚು ಮನೆಗಳಲ್ಲಿ ಶೌಚಾಲಯಗಳಿವೆ. ಹೆಚ್ಚು ನೀರು ಬೇಕಾಗುತ್ತದೆ ಎಂಬ ಕಾರಣಕ್ಕೆ ಬಹುತೇಕರು ಇಂದಿಗೂ ಬಹಿರ್ದೆಸೆಗೆ ಬಯಲಿಗೆ ಹೋಗುತ್ತಾರೆ.

ಜಿಲ್ಲೆಯಲ್ಲಿ 2,40,476 ಕುಟುಂಬಗಳಿವೆ. ಬಹುತೇಕ ಎಲ್ಲ ಮನೆಗಳಿಗೂ ಶೌಚಾಲಯ ಮಂಜೂರು ಆಗಿವೆ. ಆದರೂ, 13,358 ಶೌಚಾಲಯ ನಿರ್ಮಾಣ ಕಾರ್ಯ ಬಾಕಿ ಇದೆ.

* ಇದನ್ನೂ ಓದಿ:‘ಸ್ಮಾರ್ಟ್ಸಿಟಿ’ ಹಣೆಪಟ್ಟಿಯ ತುಮಕೂರು | ಕೆರೆಯ ಅಂಗಳವೇ ಇಲ್ಲಿ ಶೌಚಾಲಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.