ಹಿರಿಯೂರು: ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆಜಿ–ಯುಕೆಜಿ ತರಗತಿ ಪ್ರಾರಂಭ ಮಾಡುವುದರಿಂದ ಅಂಗನವಾಡಿ ಕೇಂದ್ರಗಳಲ್ಲಿ ನೀಡುತ್ತಿರುವ ಶಾಲಾ ಪೂರ್ವ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ಬರುತ್ತದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಆರೋಪಿಸಿದೆ.

‘ದೇಶದಲ್ಲಿ 29 ಲಕ್ಷ, ರಾಜ್ಯದಲ್ಲಿ 70,000 ಅಂಗನವಾಡಿ ಕೇಂದ್ರಗಳ ಮೂಲಕ ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ. ಸರ್ಕಾರವು ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ಆರಂಭಿಸಬೇಕೆಂದು ಹಲವು ವರ್ಷಗಳಿಂದ ಹೋರಾಟ ನಡೆಸುತ್ತ ಬಂದಿದ್ದೇವೆ. ಆದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವ ಬದಲು ಅಂಗನವಾಡಿಗಳನ್ನು ದುರ್ಬಲಗೊಳಿಸಲು ಹೊರಟಿದೆ’ ಎಂದು ಪದಾಧಿಕಾರಿಗಳು ಆರೋಪಿಸಿದ್ದಾರೆ.

ಪ್ರವೇಶಾತಿ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸಬೇಕು. ನಿವೃತ್ತಿಯಾಗಿರುವ ಅಂಗನವಾಡಿ ಸಿಬ್ಬಂದಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಬೇಕು ಎಂದು ತಾಲ್ಲೂಕು ಎಐಟಿಯುಸಿ ಅಧ್ಯಕ್ಷ ಎಸ್.ಸಿ. ಕುಮಾರ್, ಬಿ.ಪಿ.ನಿರ್ಮಲ, ಅನುಸೂಯಮ್ಮ, ಕಾಂಚನ, ಲಲಿತಮ್ಮ, ಸುವರ್ಣಮ್ಮ ಒತ್ತಾಯಿಸಿದ್ದಾರೆ.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಈರಲಿಂಗೇಗೌಡ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.