ಚಿತ್ರದುರ್ಗ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ಬಿಜೆಪಿ ಹಿಂದೂ ರಾಷ್ಟ್ರ ಕಟ್ಟುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿವೆ. ಹಾಗಂತ ಬೇರೆ ಧರ್ಮವನ್ನು ವಿರೋಧಿಸುವುದಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಡೋಂಗಿ ರಾಜಕಾರಣ ಮಾಡುವುದಿಲ್ಲ. ಇಂದು ಇಲ್ಲವೇ ನಾಳೆ ಹಿಂದೂ ರಾಷ್ಟ್ರ ಕಟ್ಟುತ್ತೇವೆ. ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಕೆಲಸ ಮಾಡುವುದಿಲ್ಲ’ ಎಂದರು.

‘ಧಾರ್ಮಿಕ ಮಂದಿರಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶ ಪಾಲನೆ ಮಾಡುವುದು ಸರ್ಕಾರದ ಕರ್ತವ್ಯ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಅತ್ಯುನ್ನತ ಅಧಿಕಾರವಿದೆ. ನಂಜನಗೂಡು ದೇಗುಲ ಧ್ವಂಸ ಗೊತ್ತಿಲ್ಲದೆಯೂ ಆಗಿರಬಹುದು. ಈ ಬಗ್ಗೆ ಚರ್ಚೆ ನಡೆಸಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ನ್ಯಾಯಾಲಯದ ಆದೇಶದಲ್ಲಿ ಲೋಪವಿದ್ದರೆ ತಿದ್ದುಪಡಿ ಮಾಡುವ ಅಧಿಕಾರ ಸಂಸತ್ತಿಗೆ ಇದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.