ಚಿತ್ರದುರ್ಗ: ತಾಲ್ಲೂಕಿನ ಕೆಳಗಳಹಟ್ಟಿಯ ಜಮೀನಿನಲ್ಲಿ ರೈತ ಮಹಿಳೆ ಭಾಗ್ಯಮ್ಮ (55) ಎಂಬುವರನ್ನು ಕೊಲೆ ಮಾಡಲಾಗಿದೆ.

ಭಾಗ್ಯಮ್ಮ ಅವರು ಮಂಗಳವಾರ ಬೆಳಿಗ್ಗೆ ಸೇವಂತಿ ಬೆಳೆಗೆ ನೀರು ಹಾಯಿಸಲು ಜಮೀನಿಗೆ ತೆರಳಿದ್ದರು. ಈ ವೇಳೆ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಕೆಲವರು ಕೊಚ್ಚಿ ಕೊಲೆ ಮಾಡಿದ್ದಾರೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಜಮೀನು ಅಳತೆ ವಿಚಾರದಲ್ಲಿ ಪಕ್ಕದ ಜಮೀನಿನ ಮಾಲೀಕರೊಂದಿಗೆ ಗಲಾಟೆ ನಡೆದಿತ್ತು. ಈ ಕುರಿತು ಗ್ರಾಮದಲ್ಲಿ ರಾಜಿ ಪಂಚಾಯಿತಿಗಳು ನಡೆದಿದ್ದವು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.