ಮೊಳಕಾಲ್ಮುರು: ‘ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಶುಕ್ರವಾರ ಭಾರತೀಯ ಕಮ್ಯೂನಿಷ್ಟ್ ಪಕ್ಷ (ಮಾರ್ಕ್ಸ್ ವಾದಿ) ಕಾರ್ಯಕರ್ತರು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಕಳೆದರೂ, ಅದರ ಆಡಳಿತ ನೀತಿ ಹಿಂದೆನಂತೆಯೇ ಇದ್ದು ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಸರ್ಕಾರದ ಬಜೆಟ್ ಮತ್ತು ಆರ್ಥಿಕ ನೀತಿಗಳು ಕಾರ್ಪೋರೇಟ್ ಪರವಾಗಿವೆ. ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಬಗ್ಗೆ ಮಲತಾಯಿ ಧೋರಣೆ ನಡೆಸುವ ಮೂಲಕ ಅಧಿಕಾರವೇ ಮುಖ್ಯ ಎಂಬುದನ್ನು ಪ್ರತಿಪಾದಿಸುತ್ತಿದೆ’ ಎಂದು ದೂರಿದರು.

‘ವಿರೋಧ ಪಕ್ಷಗಳ ನಾಯಕರ ವಿರುದ್ಧ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಭಯ ಹುಟ್ಟಿಸಲಾಗುತ್ತಿದೆ. ಪಾರದರ್ಶಕ ಆಡಳಿತ ವ್ಯವಸ್ಥೆ ಇದರಿಂದ ಮರೆಯಾಗುತ್ತಿದೆ. ಒಂದು ದೇಶ ಒಂದು ಚುನಾವಣೆ ಪ್ರಸ್ತಾವನೆ ಕೈಬಿಡಬೇಕು’ ಎಂದು ಆಗ್ರಹಿಸಿದರು.

‘ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡಬೇಕು, ಉದ್ಯೋಗ ಸೃಷ್ಟಿಗೆ ಒತ್ತು ನೀಡುವ ಮೂಲಕ ನಿರುದ್ಯೋಗಕ್ಕೆ ಕಡಿವಾಣ ಹಾಕಬೇಕು, ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳಬೇಕು, ತಾಲ್ಲೂಕಿನಲ್ಲಿ ನನೆಗುದಿಗೆ ಬಿದ್ದಿರುವ ಬಗರ್ ಹುಕುಂ ಸಾಗುವಳಿ ಪತ್ರಗಳನ್ನು ತಕ್ಷಣ ವಿಲೇವಾರಿ ಮಾಡಬೇಕು’ ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ತಹಶೀಲಾರ್ ಟಿ. ಜಗದೀಶ್ ಮನವಿ ಸ್ವೀಕರಿಸಿದರು. ಪಕ್ಷದ ಜಿಲ್ಲಾ ಸಂಚಾಲಕ ಡಿ.ಎಂ. ಮಲಿಯಪ್ಪ, ತಾಲ್ಲೂಕು ಸಮಿತಿಯ ದಾನಸೂರನಾಯಕ, ನಾಗೇಶ್, ಕೆ.ಟಿ. ನಾಗರಾಜಪ್ಪ, ಸಿದ್ದೇಶ್, ಪೂಜಾರಿ ಮಲ್ಲಣ್ಣ, ಮೂರ್ತಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.