ಚಿತ್ರದುರ್ಗ: ‘ನ್ಯಾಯಾಲಯವು ನಟ ದರ್ಶನ್ ಸೇರಿ ಕೆಲ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿರುವುದು ಸ್ವಾಗತಾರ್ಹ. ನ್ಯಾಯಾಂಗ, ಪೊಲೀಸ್ ಇಲಾಖೆ ಮೇಲೆ ನಮಗಿದ್ದ ಗೌರವ ಇದರಿಂದ ಹೆಚ್ಚಿದೆ. ನನ್ನ ಮಗನ ಸಾವಿಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆಯೂ ಬಲವಾಗಿದೆ’ ಎಂದು ರೇಣುಕಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡರ್ ತಿಳಿಸಿದರು.

‘ಸರ್ಕಾರಿ ವಕೀಲರು ಉತ್ತಮವಾಗಿ ವಾದ ಮಂಡಿಸಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ ಎಂಬ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ’ ಎಂದು ಸೋಮವಾರ ಮಾಧ್ಯಮದವರಿಗೆ ಹೇಳಿದರು.

‘ನ್ಯಾಯಾಲಯ ಶೀಘ್ರವಾಗಿ ವಿಚಾರಣೆ ಮುಗಿಸಿ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು. ರೇಣುಕಸ್ವಾಮಿ ಪತ್ನಿ ಸಹನಾಗೆ ಮುಂದಿನ ತಿಂಗಳು ಹೆರಿಗೆಯಾಗಲಿದೆ. ಸರ್ಕಾರ ಆಕೆಯ ಜೀವನೋಪಾಯಕ್ಕೆ ಸಹಾಯ ಮಾಡಬೇಕು. ಸರ್ಕಾರಿ ನೌಕರಿ ಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ರೇಣುಕಸ್ವಾಮಿ ಸಂಬಂಧಿ ಷಡಾಕ್ಷರಯ್ಯ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.