ಸಿರಿಗೆರೆ (ಚಿತ್ರದುರ್ಗ): ಡಿಸೆಂಬರ್ನಲ್ಲಿ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಗೆ ಸಿರಿಗೆರೆಯ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸೇರಿ ಮೂವರ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕವು ಶಿಫಾರಸ್ಸು ಮಾಡಿದೆ.

ಈ ಕುರಿತು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

‘ಜಿಲ್ಲೆಯಿಂದ ಮೂವರ ಹೆಸರುಗಳನ್ನು ರಾಜ್ಯ ಸಮಿತಿಗೆ ಕಳುಹಿಸಲಾಗಿದೆ. ಸಾಹಿತಿ ಮತ್ತು ಇತಿಹಾಸಕಾರ ಪ್ರೊ.ಬಿ.ರಾಜಶೇಖರಪ್ಪ ಹಾಗೂ ಲೇಖಕ ಬಿ.ಎಲ್. ವೇಣು ಅವರ ಹೆಸರುಗಳೂ ಪಟ್ಟಿಯಲ್ಲಿವೆ’ ಎಂದು ಹೇಳಿದ್ದಾರೆ.

‘ಮಧ್ಯ ಕರ್ನಾಟಕದಲ್ಲಿ ನೂರಾರು ಕೆರೆಗಳಿಗೆ ತುಂಗಭದ್ರಾ ನದಿ ನೀರು ಹರಿಸಲು ಸ್ವಾಮೀಜಿ ಅವಿರತವಾಗಿ ಶ್ರಮಿಸಿದ್ದಾರೆ. ಅಲ್ಲದೇ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲೂ ಅನನ್ಯ ಸೇವೆ ಸಲ್ಲಿಸುತ್ತಿದ್ದಾರೆ. ಆದ್ದರಿಂದ ತರಳಬಾಳು ಶ್ರೀ ಹೆಸರು ಶಿಫಾರಸ್ಸು ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.