ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿಚಾರಣೆಯನ್ನು ತನಿಖಾಧಿಕಾರಿಗಳು ಭಾನುವಾರ ಮುಂದುವರಿಸಿದ್ದಾರೆ.

ಪೊಲೀಸ್ ವಶಕ್ಕೆ ಪಡೆದಿರುವ ತನಿಖಾ ತಂಡ ಆರೋಪಿಯನ್ನು ಡಿವೈಎಸ್ಪಿ ಕಚೇರಿಯಲ್ಲಿ ಉಳಿಸಿದೆ. ಶನಿವಾರ ರಾತ್ರಿ ಊಟ ಸೇವಿಸಿದ ಶರಣರು ವಿಶ್ರಾಂತಿ ಪಡೆದರು. ಬೆಳಿಗ್ಗೆ ಎದ್ದು ನಿತ್ಯಕರ್ಮ ಮುಗಿಸಿದ ಅವರಿಗೆ ತಿಂಡಿ ನೀಡಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ವಿಚಾರಣೆ ಮುಂದುವರಿಸಲಾಗಿದೆ. ಬೆಳಿಗ್ಗೆ 11.20ಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು.

ಪರಿಶಿಷ್ಟ ಕಾಯ್ದೆ ಅಡಿ ಮುರುಘಾ ಶರಣರ ವಿರುದ್ಧದ ಪ್ರಕರಣ: ವರದಿ ಸಲ್ಲಿಸಲು ಸೂಚನೆ

ಲೈಂಗಿಕ ಕಿರುಕುಳ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಮೊದಲ ಆರೋಪಿ ಶಿವಮೂರ್ತಿ ಮುರುಘಾ ಶರಣರನ್ನು ಸೆ.1ರಂದು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಶರಣರನ್ನು ಸೆ.2 ರಂದು ಪೊಲೀಸರು ವಶಕ್ಕೆ ಪಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.