ಚಿತ್ರದುರ್ಗ: ಭಾರಿ ಮಳೆಯಿಂದ ಹಾನಿಗೊಳಗಾಗಿರುವ ಓಬಣ್ಣನಹಳ್ಳಿ ಗ್ರಾಮಕ್ಕೆ ಎಸ್‌ಸಿಪಿ–ಟಿಎಸ್‌ಪಿ ಯೋಜನೆಯಡಿ ವಿಶೇಷ ಪ್ಯಾಕೇಜ್ ಘೋಷಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಕಳೆದ ವಾರ ಸುರಿದ ಹೆಚ್ಚು ಮಳೆಯಿಂದ ಹಾನಿಗೊಳಗಾದ ತಾಲ್ಲೂಕಿನ ಓಬಣ್ಣನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ಓಬಣ್ಣನಹಳ್ಳಿ ಸುತ್ತಮುತ್ತ ಬೆಟ್ಟ ಇದೆ. ಹೀಗಾಗಿ ಹೆಚ್ಚು ಮಳೆಯಿಂದಾಗಿದೆ. ಬೆಟ್ಟದಿಂದ ಹರಿದುಬಂದ ಮಳೆನೀರು ಗ್ರಾಮದ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಹಲವು ಮನೆಗಳು ಭಾಗಶಃ ಕುಸಿದಿವೆ. ಮನೆಗೆ ನೀರು ನುಗ್ಗಿದ ಕಾರಣ ಮನೆಯಲ್ಲಿದ್ದ ಬಟ್ಟೆ, ದವಸ, ಧಾನ್ಯಗಳು ಹಾಳಾಗಿವೆ. ನೊಂದವರಿಗೆ ಸಾಂತ್ವನ ಹೇಳಲು ನಾನು ಇಲ್ಲಿಗೆ ಬಂದಿದ್ದು, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಮಳೆ ನೀರು ನುಗ್ಗಿದ್ದರಿಂದ ಹಲವು ವಸ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಈಗಾಗಲೇ ತಹಶೀಲ್ದಾರ್ ಅವರು ಹಾನಿಯಾದ ಮನೆಗಳಿಗೆ ತಲಾ ₹ 5 ಸಾವಿರ ತುರ್ತು ಪರಿಹಾರ ನೀಡಿದ್ದಾರೆ. ಹಾನಿಯಾಗಿರುವ ಮನೆಗಳು, ಗುಡಿಸಲುಗಳನ್ನು ಪಟ್ಟಿ ಮಾಡಿ ಮನೆ ನಿರ್ಮಾಣಕ್ಕೆ ಕ್ರಮ ವಹಿಸಬೇಕು. ಎಸ್‌ಸಿಪಿ– ಟಿಎಸ್‌ಪಿ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದರು.

ಗ್ರಾಮದ ಹಲವರು ನಿವೇಶನದ ಕೊರತೆಯಿಂದ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದರ ಜೊತೆಗೆ ಹಳ್ಳ ಒತ್ತುವರಿ ಮಾಡಿಕೊಂಡು ಹಲವರು ಮನೆ ನಿರ್ಮಾಣ ಮಾಡಿದ್ದಾರೆ. ಅಂತಹ ಮನೆಗಳನ್ನು ತೆರವುಗೊಳಿಸಿ ನಿವಾಸಿಗಳಿಗೆ ಪ್ರತ್ಯೇಕ ಸೌಲಭ್ಯ ಒದಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಗ್ರಾಮದಲ್ಲಿ 3 ಎಕರೆ ಗ್ರಾಮ ಠಾಣಾ ಜಾಗ ಲಭ್ಯವಿದ್ದು, ಲೇ ಔಟ್ ಮಾಡಲು ಅವಕಾಶಗಳಿವೆ. ಈ ಕುರಿತು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ ಕಾನೂನು ಪ್ರಕಾರ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಲಾಗುವುದು. ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ತಹಶೀಲ್ದಾರ್ ನಾಗವೇಣಿ ಇದ್ದರು.

ಭಾರಿ ಮಳೆಗೆ ಬೆಟ್ಟೆ, ದವಸ, ಧಾನ್ಯ ಹಾಳು ಹಾನಿಯಾದ ಮನೆಗಳಿಗೆ ತುರ್ತು ಪರಿಹಾರ ಹೊಸ ಲೇಔಟ್ ನಿರ್ಮಿಸಲು ಯೋಜನೆ ರೂಪಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.