ಚಿತ್ರದುರ್ಗ: ಇಲ್ಲಿನ ಎಸ್ಎಲ್ವಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ನಾಡಿಗ್ ಓಂಪ್ರಕಾಶ್ (17) ಹೃದಯಾಘಾತದಿಂದ ಮಂಗಳವಾರ ನಿಧನರಾದರು.

ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ಓಂಪ್ರಕಾಶ್ ಚಿತ್ರದುರ್ಗದ ಕಾಲೇಜಿನಲ್ಲಿ ವ್ಯಾಸಂಗಮಾಡುತ್ತಿದ್ದರು. ಎಂದಿನಂತೆ ಬೆಳಿಗ್ಗೆ 8.30ಕ್ಕೆ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿ, ಕೊಠಡಿಗೆ ತೆರಳುವಾಗ ದಿಢೀರ್ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕುಸಿದು ಬಿದ್ದಿದ್ದನ್ನು ಗಮನಿಸಿದ ಸಹಪಾಠಿಗಳು ಹಾಗೂ ಶಿಕ್ಷಕರು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಸಾವಿಗೆ ಹೃದಯಾಘಾತ ಕಾರಣವೆಂದು ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.