ಚಿತ್ರದುರ್ಗ: ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ಮನೆಯ ಬೀಗ ಮುರಿದು ಕಳವು ಮಾಡಲಾಗಿದೆ.

ಚಿತ್ರದುರ್ಗ ನಗರದ ಧವಳಗಿರಿ ಬಡಾವಣೆಯಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದ್ದು, ಶನಿವಾರ ಬೆಳಕಿಗೆ ಬಂದಿದೆ.

ಮನೆಯ ಬೀರುವಿನಲ್ಲಿದ್ದ ನಗದು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಶಾಸರಾಗಿರುವ ಗೋಪಾಲಕೃಷ್ಣ ಮೂಲತಃ ಮೊಳಕಾಲ್ಮುರು ತಾಲ್ಲೂಕಿನವರು. ಚಿತ್ರದುರ್ಗಕ್ಕೆ ಬಂದಾಗ ಈ ಮನೆಯಲ್ಲಿ ತಂಗುತ್ತಿದ್ದರು. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಇರುವುದರಿಂದ ಹಲವು ದಿನಗಳಿಂದ ಮನೆ ಬೀಗ ಹಾಕಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.