ಹಿರಿಯೂರು: ತಾಲ್ಲೂಕಿನ ಕರಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಣ್ಣೆ ಈರಪ್ಪನಹಟ್ಟಿಗೆ ಗಾಯತ್ರಿ ಜಲಾಶಯದಿಂದ ಪೈಪ್ಲೈನ್ ಮೂಲಕ ನೀರು ಹರಿಸುವ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಶನಿವಾರ ಚಾಲನೆ ನೀಡಿದರು.

‘ಬೆಣ್ಣೆ ಈರಪ್ಪನಟ್ಟಿಯಲ್ಲಿ 12 ಕೊಳವೆಬಾವಿ ಕೊರೆಸಿದರೂ ನೀರು ಸಿಕ್ಕಿರಲಿಲ್ಲ. ರೈತರ ಹೊಲಗಳಲ್ಲಿನ ಕೊಳವೆಬಾವಿಗಳನ್ನು ಗುತ್ತಿಗೆ ಪಡೆದು ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿತ್ತು. ಈಗ ಗಾಯತ್ರಿಪುರ ಮತ್ತು ಬೆಣ್ಣೆ ಈರಪ್ಪನಹಟ್ಟಿಗಳಿಗೆ ಗಾಯತ್ರಿ ಜಲಾಶಯದ ನೀರನ್ನು ಪೂರೈಸಲಾಗುತ್ತಿದೆ’ ಎಂದು ಸಚಿವ ಡಿ. ಸುಧಾಕರ್ ಹೇಳಿದರು.

‘ಟ್ಯಾಂಕರ್ಗಳ ಮೂಲಕ ಜನರಿಗೆ ತೃಪ್ತಿಯಾಗುವಷ್ಟು ನೀರು ಕೊಡಲು ಕಷ್ಟವಾಗುತ್ತದೆ. ಜಾನುವಾರುಗಳಿಗೂ ನೀರು ಬೇಕಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ತಾಲ್ಲೂಕಿನ ಎಲ್ಲ ಭಾಗದ ಕೆರೆಗಳಿಗೆ ನೀರು ತುಂಬಿಸುವ ಮೂಲಕ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಬೇಕು ಎಂಬುದು ನನ್ನ ಮಹದಾಸೆ. ಹೀಗಾಗಿ ಭದ್ರಾ ಜಲಾಶಯದ ನೀರನ್ನು ವಾಣಿವಿಲಾಸಕ್ಕೆ ಹರಿಸುತ್ತಿದ್ದು, ಕೆಲವೇ ದಿನಗಳಲ್ಲಿ ಜಲಾಶಯ ಕೋಡಿ ಬೀಳುವ ವಿಶ್ವಾಸವಿದೆ’ ಎಂದು ಅವರು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷ ವೆಂಕಟೇಶ್, ಸದಸ್ಯರಾದ ರಾಮಣ್ಣ, ಸುಶೀಲಮ್ಮ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಗಂಗಮ್ಮ, ಪಿಡಿಒ ಕೆ.ಎನ್. ಮಹೇಶ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಎಂಜಿನಿಯರ್ ಬಾಷಾ ಸಾಬ್, ಮುಖಂಡರಾದ ದಿಂಡಾವರ ಮಹೇಶ್, ಭೂತೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.