ಚಳ್ಳಕೆರೆ: ಇಲಾಖೆಯಲ್ಲಿ ಒಬ್ಬರಿಗೊಬ್ಬರು ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡುವ ಮೂಲಕ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು ಎಂದು ಶಾಸಕ ಟಿ. ರಘುಮೂರ್ತಿ ಅಧಿಕಾರಿಗಳು ಹಾಗೂ ನಗರಸಭೆ ಆಡಳಿತ ಮಂಡಳಿ ಸದಸ್ಯರಿಗೆ ಸಲಹೆ ನೀಡಿದರು.

ಗುರುವಾರ ನಡೆದ ನಗರಸಭೆ ಸದಸ್ಯರ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ಜನ ಸಾಮಾನ್ಯರಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ದೂರಿದೆ. ಪೌರಕಾರ್ಮಿರಿಗೆ ವೇತನ ವಿಳಂಬ, ತೆರಿಗೆ ಪಾವತಿಸಿದವರಿಗೆ ರಸೀದಿ ನೀಡದಿರುವುದು ಗಮನಕ್ಕೆ ಬಂದಿದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಣ್ಣ ಘಟನೆಯನ್ನು ತಕ್ಷಣವೇ ಮರೆತು ಬಿಡಬೇಕು. ಅದರಿಂದ ಯಾವುದೇ ದ್ವೇಷ ಅಸೂಯೆ ಭಾವನೆಯನ್ನು ಬೆಳೆಸಿಕೊಳ್ಳಬಾರದು. ಅಭಿವೃದ್ಧಿ ಕೆಲಸದಲ್ಲಿ ಯಾವುದೇ ಗೊಂದಲ ಸೃಷ್ಟಿ ಮಾಡಬಾರದು.ಪ್ರತಿ ತಿಂಗಳು ಸಾಮಾನ್ಯ ಸಭೆಯಲ್ಲಿ ಚರ್ಚಿಸಿದ ವಿಷಯಗಳು ಕಾರ್ಯ ರೂಪಕ್ಕೆ ತರಬೇಕು. ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಸ ವಿಲೇವಾರಿ, ರಸ್ತೆ, ಚರಂಡಿ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಉಪವಿಭಾಗಾಧಿಕಾರಿ ಪ್ರಸನ್ನ, ‘ಮಹಿಳೆಯರಿಗೆ ಹೆಚ್ಚಿನ ಗೌರವ ನೀಡಬೇಕು. ಜನರ ಕೆಲಸ ಮಾಡಿಕೊಡುವಲ್ಲಿ ಉದಾಸೀನ ಮಾಡಬಾರದು. ಪ್ರಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಜನರು ನಮ್ಮನ್ನು ಗುರುತಿಸುತ್ತಾರೆ’ ಎಂದು ಹೇಳಿದರು.

ನಗರಸಭೆ ಸದಸ್ಯರಾದ ಕೆ. ವೀರಭದ್ರಯ್ಯ, ಜಯಣ್ಣ ಮಾತನಾಡಿದರು. ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ, ಉಪಾಧ್ಯಕ್ಷೆ ಜೈತುನ್ಬಿ, ಪೌರಾಯುಕ್ತ ಪಾಲಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.