ಚಿತ್ರದುರ್ಗ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿಯೊಂದು ವಿಚಾರದಲ್ಲಿಯೂ ವಿಫಲವಾಗಿದೆ. ಜನರ ಗಮನವನ್ನು ಬೇರೆಡೆ ಸೆಳೆಯಲು ಸಿ.ಡಿ. ಪ್ರಕರಣವನ್ನು ಬಳಸಿಕೊಳ್ಳುತ್ತಿದೆ. ಅಭಿವೃದ್ಧಿಯ ಬದಲು ಕಾಲಾಹರಣ ಮಾಡುತ್ತಿದೆ ಎಂದು ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರಕ್ಷ ರಾಮಯ್ಯ ಆರೋಪ ಮಾಡಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾರ್ಮಿಕರು, ವಿದ್ಯಾರ್ಥಿಗಳು, ನಿರುದ್ಯೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಧನ ಬೆಲೆ ಏರಿಕೆಯಾಗಿದೆ. ಕೃಷಿ ಪರಿಕರಗಳ ಬೆಲೆ ಹೆಚ್ಚಾಗಿದ್ದು, ಪೈಪುಗಳನ್ನು ಖರೀದಿಸಲು ರೈತರು ಹೆಣಗಾಡುವ ಸ್ಥಿತಿ ಇದೆ. ಇವರ ಸಂಕಷ್ಟವನ್ನು ಆಲಿಸುವವರು ಯಾರು’ ಎಂದು ಪ್ರಶ್ನಿಸಿದರು.

‘ಯುವ ಸಮೂಹಕ್ಕೆ ಕಾಂಗ್ರೆಸ್ ಒತ್ತು ನೀಡುತ್ತಿದೆ. ಚುನಾವಣೆಯಲ್ಲಿ ಯುವ ಸಮೂಹಕ್ಕೆ ಶೇ 35ರಷ್ಟು ಮೀಸಲಾತಿ ಕಲ್ಪಿಸುವಂತೆ ವರಿಷ್ಠರಿಗೆ ಮನವಿ ಮಾಡಲಾಗಿದೆ. ಮುಂಬರುವ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಯುವ ನಾಯಕರಿಗೆ ಮನ್ನಣೆ ಸಿಗಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.