ಮಂಗಳೂರು: ನಗರದ ರಥಬೀದಿಯ ಸರ್ಕಾರಿ ಕಾಲೇಜಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಎಬಿವಿಪಿ ಕಾರ್ಯಕರ್ತರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಕ್ಯಾಂಪಸ್ಗೆ ಮಾಧ್ಯಮಗಳನ್ನು ಕರೆತಂದು ಅಮಾಯಕ ಎಬಿವಿಪಿ ಕಾರ್ಯಕರ್ತರನ್ನು ಕೆರಳಿಸುವ ಮೂಲಕ ಬೆದರಿಕೆ ಮತ್ತು ನಿಂದನೆಗಳನ್ನು ಹಾಕಲಾಗಿದೆ. ಅನಗತ್ಯವಾಗಿ ಸಾಮಾಜಿಕ ಮಾಧ್ಯಮದ ಮೂಲಕ ದ್ವೇಷ ಮತ್ತು ಬೆದರಿಕೆಗಳನ್ನು ಒಡ್ಡಲಾಗುತ್ತಿದೆ ಎಂದು ದೂರಿದರು.

ಎಬಿವಿಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಇಡೀ ಘಟನೆಯು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದಿದ್ದು, ಮಾಧ್ಯಮಗಳು ಚಿತ್ರೀಕರಣ ಮಾಡಿವೆ. ಎಬಿವಿಪಿ ಕಾರ್ಯಕರ್ತರ ಗುರುತು ಮತ್ತು ಮೊಬೈಲ್ ಸಂಖ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದರಿಂದಾಗಿ ಕಾರ್ಯಕರ್ತರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿಸಿದರು.

ಉದ್ದೇಶಪೂರ್ವಕವಾಗಿ ಕೋಮು ಸೌಹಾರ್ದ ಕದಡಲಾಗುತ್ತಿದ್ದು, ಕಾಲೇಜು ಕ್ಯಾಂಪಸ್ಗಳಲ್ಲಿ ಶಾಂತಿ ಮತ್ತು ನೆಮ್ಮದಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರಾಂತ ಕಾರ್ಯದರ್ಶಿ ಮಣಿಕಂಠ ಕಳಸ ನೇತೃತ್ವದಲ್ಲಿ ಪದಾಧಿಕಾರಿಗಳಾದ ಅಜಯ್ ಪ್ರಭು, ಹರ್ಷಿತ್ ಕೊಯಿಲ, ನಿಶಾನ್ ಆಳ್ವ, ಶ್ರೇಯಸ್ ಶೆಟ್ಟಿ, ಆದಿತ್ಯ ಶೆಟ್ಟಿ, ಆದರ್ಶ್ ಉಪ್ಪಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.