ಸುಳ್ಯ (ದಕ್ಷಿಣ ಕನ್ನಡ): ತಾಲ್ಲೂಕಿನ ಜಾಲ್ಸೂರು ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ರಸ್ತೆ ಬದಿ ನಿಂತಿದ್ದ ಕಾರ್ಮಿಕರ ಮೇಲೆ ಕಾರು ಹಾಯ್ದು ಮೂವರು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಕಾಕೊಳ ತಾಂಡಾದ ಚೆನ್ನಪ್ಪ, ರೇಖಪ್ಪ, ಮಹಾಂತಪ್ಪ ಮೃತಪಟ್ಟವರು. ವೆಂಕಪ್ಪ ಅವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಕೂಲಿ ಕೆಲಸಕ್ಕೆಂದು ಹಾವೇರಿಯಿಂದ ಸುಳ್ಯಕ್ಕೆ ಬಂದಿದ್ದ ನಾವು, ಗುರುವಾರ ಬೆಳಿಗ್ಗೆ ರಸ್ತೆ ಬದಿಯಲ್ಲಿ ನಿಂತಿದ್ದೆವು. ಈ ವೇಳೆ ಹುಣಸೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರನ್ನು (ಕೆಎ 16, ಎಂ 6152) ಚಾಲಕ ನಿರ್ಲಕ್ಷ್ಯದಿಂದ ಚಲಾಯಿಸಿ, ನಮ್ಮ ಜತೆಗಿದ್ದ ನಾಲ್ವರಿಗೆ ಡಿಕ್ಕಿ ಹೊಡಿಸಿದ’ ಎಂದು ಹುಲಿಗೆಪ್ಪ ಎಂಬುವರು ದೂರು ನೀಡಿದ್ದಾರೆ.

ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.