ಮಂಗಳೂರು: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬುಲೆನ್ಸ್ನಲ್ಲಿ ಬಂದು ಸಿಇಟಿ ಪರೀಕ್ಷೆ ಬರೆದರು.

ಮಾರ್ಚ್ 4ರಂದು ದ್ವಿತೀಯ ಪಿ.ಯು ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯ ಮೇಲೆ ಆರೋಪಿ ಅಬಿನ್ ಎಂಬಾತ ಆ್ಯಸಿಡ್ ಎರಚಿದ್ದ. ಈ ವೇಳೆ ಆಕೆಯ ಜೊತೆಗಿದ್ದ ಇಬ್ಬರು ಸ್ನೇಹಿತರಿಗೂ ಆ್ಯಸಿಡ್ ತಾಗಿ ಗಾಯಗಳಾಗಿದ್ದವು. ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ವಿದ್ಯಾರ್ಥಿನಿಯು ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿದ್ದುಕೊಂಡೇ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು.

‘ವಿದ್ಯಾರ್ಥಿನಿಯ ತಾಯಿ ವಿನಂತಿ ಪತ್ರ ನೀಡಿ ಮಗಳಿಗೆ ಸಮೀಪದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಿನಂತಿಸಿದ್ದರು. ಈ ವಿಷಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ಎಸ್. ರಮ್ಯಾ ಅವರಿಗೆ ತಿಳಿಸಿದಾಗ ಅವರು, ಸಮೀಪದ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಸೂಚನೆ ನೀಡಿದ್ದರು. ಅದರಂತೆ, ಪದುವಾ ಕೇಂದ್ರದಲ್ಲಿ ವಿದ್ಯಾರ್ಥಿನಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗಿತ್ತು. ಗುರುವಾರ ಮತ್ತು ಶುಕ್ರವಾರ ಸಂತ್ರಸ್ತ ವಿದ್ಯಾರ್ಥಿನಿ ಆಂಬುಲೆನ್ಸ್ನಲ್ಲಿ ಬಂದು ಪರೀಕ್ಷೆ ಬರೆದಿದ್ದಾರೆ. ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆಗೊಳಿಸಲಾಗಿತ್ತು’ ಎಂದು ಡಿಡಿಪಿಯು ಸಿ.ಡಿ. ಜಯಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.