ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಉತ್ಸವದಲ್ಲಿ ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಕಲೆ ಮುಂತಾದ ಸುಮಾರು 40 ವಿಭಾಗಗಳಲ್ಲಿ ಆಕರ್ಷಕ ಸ್ಪರ್ಧೆಗಳು ನಡೆಯಲಿವೆ. ಒಟ್ಟು ₹ 5 ಲಕ್ಷ ಬಹುಮಾನ ಗಿಟ್ಟಿಸಲು ಅವಕಾಶವಿದೆ. ವೈದ್ಯಕೀಯ, ಎಂಜಿನಿಯರಿಂಗ್, ಕಾನೂನು ಹಾಗೂ ಇತರ ಪದವಿ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಈಗಾಗಲೇ 50 ಕ್ಕೂ ಹೆಚ್ಚು ಕಾಲೇಜುಗಳು ಹೆಸರು ನೋಂದಾಯಿಸಿವೆ’ ಎಂದರು.