ಬೆಳ್ತಂಗಡಿ: ‘ಕೃಷಿ ನಮ್ಮ ಸಂಸ್ಕೃತಿ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂಥ ಬದುಕು ಕಟ್ಟುವ, ಬದುಕನ್ನು ಕಾಪಾಡುವ ನೇಜಿ ನಾಟಿ ಕಾರ್ಯದಲ್ಲಿ ವಿದ್ಯಾರ್ಥಿಗಳು ಕೈಜೋಡಿಸಿದರುವುದು ಶ್ಲಾಘನೀಯ ಕಾರ್ಯ’ ಎಂದು ಸೋನಿಯಾ ಯಶೋವರ್ಮ ಹೇಳಿದರು.

ಬೆಳಾಲು ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಉಜಿರೆ ಎಸ್ಡಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಸಂಭ್ರಮಾಚರಣೆ ಸಂಬಂಧ ಉಜಿರೆಯ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಉಜಿರೆ ಎಸ್ಡಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕಾಲೇಜಿನ ಸ್ಪೋರ್ಟ್ಸ್ ಕ್ಲಬ್, ಬೆಳ್ತಂಗಡಿ ರೋಟರಿ ಕ್ಲಬ್, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘ, ಬೆಲಾಲು ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ ಸುಮಾರು 500 ವಿದ್ಯಾರ್ಥಿಗಳಿಂದ ‘ಯುವ ಸಿರಿ - ರೈತ ಭಾರತದ ಐಸಿರಿ’ ನೇಜಿ ನಾಟಿ ಕಾರ್ಯಕ್ರಮದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಯುವ ಜನತೆಯಲ್ಲಿ ಅಪಾರ ಶಕ್ತಿ ಇದ್ದು, ಅವರಿಗೆ ಸರಿಯಾದ ಮಾರ್ಗದರ್ಶನ ಸಿಕ್ಕಾಗ ಸಮೃದ್ಧವಾದ ಸಂಸ್ಕಾರಭರಿತ ಸಮಾಜ ನಿರ್ಮಾಣವಾಗುತ್ತದೆ. ಕೆಟ್ಟದ್ದನ್ನು ದೂರ ಮಾಡಿ ಒಳ್ಳೆಯ ವಿಚಾರಗಳನ್ನು ಬಿತ್ತುವ ಕಾರ್ಯವಾಗಬೇಕು’ ಎಂದರು.

ಶಾಸಕ ಹರೀಶ್ ಪೂಂಜ ನೇಜಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ, ‘ಯುವ ಪೀಳಿಗೆ ಹಾಗೂ ಹಿರಿಯರನ್ನು ಒಟ್ಟು ಸೇರಿಸಿಕೊಂಡು ತುಳುನಾಡಿನ ಸತ್ವವನ್ನು ಸಾರುವ ಕೆಲಸವನ್ನು ಬದುಕು ಕಟ್ಟೋಣ ತಂಡ ಮಾಡುತ್ತಿದೆ’ ಎಂದರು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಮಾತನಾಡಿ, ಈ ಕಾರ್ಯಕ್ರಮದ ಹಿಂದೆ ಒಂದು ತಿಂಗಳ ಶ್ರಮ ಇದೆ. ನೇಜಿ ನೆಡುವ ಕೆಲಸ ಮಾತ್ರವಲ್ಲ; ಅದನ್ನು ಚೆನ್ನಾಗಿ ಬೆಳೆಸಿ ಕಟಾವು ಮಾಡಿ ಭತ್ತ ಮತ್ತು ಬೈ ಹುಲ್ಲನ್ನು ಬೇರ್ಪಡಿಸುವವರೆಗಿನ ಕೆಲಸವೂ ನಮ್ಮಿಂದಲೇ ನಡೆಯಲಿದೆ. ಇದು ಎಲ್ಲರಿಗೂ ಪ್ರೇರಣೆಯಾಗಬೇಕು. ಎಲ್ಲರ ಸಹಕಾರದಿಂದ ಮಾತ್ರ ಇದು ಸಾಧ್ಯವಾಗಿದೆ. ತಾಲ್ಲೂಕಿನ ಬೇರೆ ಬೇರೆ ಕಡೆಗಳಿಂಲೂ ಇಂಥ ಕಾರ್ಯಕ್ಕೆ ಬೇಡಿಕೆ ಬಂದಿದೆ’ ಎಂದರು.

ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹನಾಯಕ್, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲ ಬಿ.ಎ.ಕುಮಾರ ಹೆಗ್ಡೆ, ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ರವೀಶ್ ಪಡುಮಲೆ, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಕೆ.ಧನಂಜಯ ರಾವ್, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಕಾರ್ಯದರ್ಶಿ ದುರ್ಗಾ ಪ್ರಸಾದ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಧರ್ಮಸ್ಥಳ ಕೃಷಿ ವಿಭಾಗದ ಬಾಲಕೃಷ್ಣ ಪೂಜಾರಿ, ಎಸ್ಡಿಎಂ ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿಗಳಾದ ಮಹೇಶ್ ಶೆಟ್ಟಿ, ದೀಪಾ ಆರ್.ರಾವ್, ಎಸ್ಡಿಎಂ ಸ್ಪೋರ್ಟ್ಸ್ ಕ್ಲಬ್ ಮುಖ್ಯಸ್ಥ ರಮೇಶ್ ಭಾಗವಹಿಸಿದ್ದರು.

ಮುಖ್ಯಾಂಶಗಳು

ಸುಮಾರು 1000 ಮಂದಿ ನೇಜಿ ನಾಟಿ ಕಾರ್ಯದಲ್ಲಿ ಭಾಗಿ

ದೇವಸ್ಥಾನದ ಬಳಿಯಿಂದ ಮೆರವಣಿಗೆ

ನೇಜಿ ನಾಟಿ ಕಾರ್ಯದಲ್ಲಿ ಭಾಗಿಯಾದವರಿಗೆ ಸಮವಸ್ತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.