ಮಂಗಳೂರು: ಆರ್ಎಸ್ಬಿ ಕೊಂಕಣಿ ಭಾಷೆಯಲ್ಲಿ ಪ್ರಥಮ ಬಾರಿಗೆ ನಿರ್ಮಾಣಗೊಂಡಿರುವ ಚಲನಚಿತ್ರ ‘ಅಮ್ಚೆ ಸಂಸಾರ್’ ಡಿ.19ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಭಾರತ್ ಸಿನಿಮಾಸ್ನಲ್ಲಿ ತೆರೆಕಾಣಲಿದೆ ಎಂದು ಪತ್ರಕರ್ತ ಪುಂಡಲೀಕ ಮರಾಠೆ ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ಬ್ಯಾಂಕ್ ಮಂಗಳೂರು ಶಾಖೆಯ ನಿವೃತ್ತ ಪ್ರಧಾನ ವ್ಯವಸ್ಥಾಪಕ ಎನ್.ಉಪೇಂದ್ರ ನಾಯಕ್ ಉದ್ಘಾಟಿಸುವರು. ಮಂಗಳೂರು ಆರ್ಎಸ್ಬಿ ಸಂಘದ ಅಧ್ಯಕ್ಷ ಆರ್.ಎಂ.ಪ್ರಭು ಅಧ್ಯಕ್ಷತೆ ವಹಿಸುವರು. ಈ ಚಿತ್ರಕ್ಕೆ ‘ಯು’ ಸರ್ಟಿಫಿಕೇಟ್ ಸಿಕ್ಕಿದ್ದು, ಸಂದೀಪ್ ಕಾಮತ್ ಅಜೆಕಾರು ಚಿತ್ರ ನಿರ್ದೇಶಿಸಿದ್ದಾರೆ. ಭುವನೇಶ್ ಪ್ರಭು ಹಿರೇಬೆಟ್ಟು ಸಿನೆಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ ಎಂದರು.

ಚಿತ್ರ ತಂಡದ ಸಂದೀಪ್ ಕಾಮತ್ ಅಜೆಕಾರು, ಭುವನೇಶ್ ಪ್ರಭು ಹಿರೇಬೆಟ್ಟು, ನಟ ರೋಹನ್ ನಾಯಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.