ಮಂಗಳೂರು: ‘ವಕ್ಫ್ ಮಂಡಳಿಗೆ ಸೇರಿರುವ 29ಸಾವಿರ ಎಕರೆಗಳಷ್ಟು ಆಸ್ತಿಯನ್ನು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರಭಾವಿಗಳು ಕಬಳಿಸಿದ್ದಾರೆ. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷನಾಗಿದ್ದಾಗ ನಾನು ಸಲ್ಲಿಸಿದ್ದ ವರದಿಯ ಆಧಾರದಲ್ಲಿ, ತನಿಖೆ ನಡೆಸಿ, ಪ್ರಭಾವಿಗಳು ಕಬಳಿಕೆ ಮಾಡಿರುವ ಆಸ್ತಿ ವಶಕ್ಕೆ ಪಡೆದರೆ, ಸರ್ಕಾರ ವಕ್ಫ್ ಜಮೀನಿಗೆ ಸಂಬಂಧಿಸಿದ ರೈತರಿಗೆ ನೋಟಿಸ್ ನೀಡುವ ಪ್ರಮೇಯವೇ ಉದ್ಭವಿಸದು’ ಎಂದು ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಹೇಳಿದರು.

ಇಲ್ಲಿ ಬುಧವಾರ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಜೊತೆ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ವಕ್ಫ್ ಮಂಡಳಿಯ ನೋಂದಾಯಿತ ಅಸ್ತಿಯೇ 54 ಸಾವಿರ ಎಕರೆ ಇರುವಾಗ, ಈಗ ರೈತರ ಜಮೀನುಗಳಿಗೆ ನೋಟಿಸ್ ನೀಡುವ ಅಗತ್ಯವಾದರೂ ಏನು? ನನ್ನ ವರದಿಯ ಆಧಾರದಲ್ಲಿ ಹಳೆಯ ಗೆಜೆಟ್ ಅಧಿಸೂಚನೆಗಳ ಆಧಾರದಲ್ಲಿ ತನಿಖೆ ನಡೆದರೆ, ವಕ್ಫ್ ಮಂಡಳಿಯ ನಿಜವಾದ ಆಸ್ತಿ ಎಷ್ಟು? ಕಬಳಿಕೆ ಆಗಿದ್ದೆಷ್ಟು ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ. ಎರಡು ಧರ್ಮಗಳ ನಡುವೆ ದ್ವೇಷ ಹುಟ್ಟಿಸುವಂತಹ ಬೆಳವಣಿಗೆಗೆ ಅವಕಾಶವೇ ಇರುವುದಿಲ್ಲ’ ಎಂದರು.

‘ಪ್ರಭಾವಿಗಳು ಕಬಳಿಕೆ ಮಾಡಿಕೊಂಡಿರುವ ವಕ್ಫ್ ಆಸ್ತಿಯ ಮೌಲ್ಯ 2012ರಲ್ಲಿ ₹ 2.30 ಲಕ್ಷ ಕೋಟಿಗಳಷ್ಟಿತ್ತು. ಈ ಜಮೀನುಗಳಲ್ಲಿ ವಾಣಿಜ್ಯ ಸಂಕೀರ್ಣ, ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳನ್ನೆಲ್ಲ ನಿರ್ಮಿಸಿದ್ದಾರೆ. ಸರಿಯಾದ ತನಿಖೆ ನಡೆದಿದ್ದೇ ಆದಲ್ಲಿ, ಅನೇಕರು ಜೈಲು ಸೇರಲಿದ್ದಾರೆ’ ಎಂದರು.

‘ಅಲ್ಪಸಂಖ್ಯಾತರ ಪರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿಯೂ ಮುಸ್ಲಿಮರ ಪರ ಕಾಳಜಿ ಇದ್ದರೆ, ನನ್ನ ವರದಿ ಆಧರಿಸಿ ಸಮಗ್ರ ತನಿಖೆ ನಡೆಸಲಿ’ ಎಂದು ಸವಾಲು ಹಾಕಿದರು.

ವಕ್ಫ್ ಸಂಬಂಧಿ ಕಾನೂನುಗಳಿಗೆ ಕೇಂದ್ರ ಸರ್ಕಾರವು ತರಲು ಉದ್ದೇಶಿಸಿರುವ ತಿದ್ದುಪಡಿಗಳ ಕುರಿತು ಪ್ರತಿಕ್ರಿಯಿಸಿದ ಅವರು, ‘ಇದಕ್ಕೆ ಬಹುತೇಕ ಒಪ್ಪಿಗೆ ಇದೆ. ಆದರೆ ಕೆಲವೊಂದು ತಿದ್ದುಪಡಿಗಳನ್ನು ಒಪ್ಪಲಾಗದು’ ಎಂದರು.

‘ನನ್ನ ವರದಿಯ ಆಧಾರದಲ್ಲಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ನನ್ನ ವರದಿಯ ವಿಚಾರವು ಪ್ರಧಾನಿ ನರೇಂದ್ರ ಮೋದಿ ಅವರ ಗಮನದಲ್ಲೂ ಇದೆ. ವಕ್ಫ್ ಕಾಯ್ದೆ ತಿದ್ದುಪಡಿಯ ಪ್ರಸ್ತಾವಕ್ಕೂ ಮುನ್ನ ಕಿರಣ್ ರಿಜಿಜು ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನನ್ನನ್ನು ನವದೆಹಲಿಗೆ ಕರೆಸಿಕೊಂಡು ಈ ಬಗ್ಗೆ ಚರ್ಚಿಸಿದ್ದರು’ ಎಂದರು.

ಪ್ರಮೋದ್ ಮುತಾಲಿಕ್ ಮಾತನಾಡಿ, ‘ಅನ್ವರ್ ಮಾಣಿಪ್ಪಾಡಿ ವರದಿ ಜಾರಿಯಾದರೆ ಹಿಂದೂಗಳಿಗೆ ಹಾಗೂ ಮುಸ್ಲಿಮರಿಗೂ ನ್ಯಾಯ ಸಿಗಲಿದೆ ಎಂಬ ವಿಶ್ವಾಸ ಇದೆ. ಬಹಳಷ್ಟು ಅಧ್ಯಯನ ನಡೆಸಿ ಈ ವರದಿ ತಯಾರಿಸಿದ್ದಾರೆ. ವಕ್ಫ್ ಆಸ್ತಿ ಕಬಳಿಸಿರುವ ಪ್ರಭಾವಿಗಳನ್ನು ಸರ್ಕಾರ ಶಿಕ್ಷೆಗೆ ಗುರಿಪಡಿಸಬೇಕು’ ಎಂದರು.

Quote - ವಕ್ಫ್ ಆಸ್ತಿ ಕಬಳಿಕೆ ಮಾಡಿರುವ ಪ್ರಭಾವಿಗಳನ್ನು ಶಿಕ್ಷಿಸುವ ಮೂಲಕ ಅಲ್ಪಸಂಖ್ಯಾತರಿಗೆ ನೆರವಾಗುವ ಉತ್ತಮ ಅವಕಾಶವನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕಳೆದುಕೊಂಡಿದೆ ಅನ್ವರ್ ಮಾಣಿಪ್ಪಾಡಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ

Cut-off box - ವಕ್ಫ್ ಗೊಂದಲ: ನೆರವಿಗೆ ಶ್ರೀರಾಮಸೇನೆಯ ಸಹಾಯವಾಣಿ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನೋಂದಣಿಯಾಗಿ ಗೊಂದಲ ಎದುರಿಸುತ್ತಿರುವ ರೈತರಿಗೆ ಸಂತ್ರಸ್ತರಿಗೆ ನೆರವಾಗಲು ಶ್ರೀರಾಮ ಸೇನೆ ಸಹಾಯವಾಣಿ (ಮೊ.99452 88819) ಆರಂಭಿಸಿದೆ. ಬುಧವಾರ ಇಲ್ಲಿ ಇದಕ್ಕೆ ಚಾಲನೆ ನೀಡಲಾಯಿತು. ’ವಕ್ಫ್ ಆಸ್ತಿಯ ಗೊಂದಲ ನಿವಾರಿಸುವ ಕಾನೂನು ಹೋರಾಟಕ್ಕೆ ಬೆಂಗಳೂರಿನ ಹೈಕೋರ್ಟ್ ಧಾರವಾಡ ಹಾಗೂ ಕಲಬುರ್ಗಿಯ ಹೈಕೋರ್ಟ್ ಪೀಠಗಳಲ್ಲಿ ನಮ್ಮ ಸಂಘಟನೆಯ ವಕೀಲರ ತಂಡ ಸಜ್ಜಾಗಿದೆ. ಸಂತ್ರಸ್ತರಿಗೆ ನಾವು ಉಚಿತ ಕಾನೂನು ನೆರವು ಒದಗಿಸಲಿದ್ದೇವೆ’ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು. ‘ಕೇವಲ ರೈತರದ್ದು ಮಾತ್ರವಲ್ಲ ಕೆಲವೆಡೆ ಮಠ ಮಂದಿರ ಜಿಲ್ಲಾಧಿಕಾರಿ ಕಚೇರಿ ಜಿಲ್ಲಾ ಪೊಲೀಸ್ ವರಿಷ್ಠರ ಕಚೇರಿಗಳನ್ನೂ ವಕ್ಫ್ ಆಸ್ತಿ ಎಂದು ತೋರಿಸಲಾಗುತ್ತಿದೆ. ಈ ಬಗ್ಗೆ ಮಠಾಧೀಶರು ಧ್ವನಿ ಎತ್ತಬೇಕು. ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯವರೂ ಪ್ರತಿಭಟಿಸಬೇಕು. ನಮ್ಮ ಆಸ್ತಿಯ ಬಗ್ಗೆ ತಕರಾರಿಲ್ಲ ಎಂದು ಸುಮ್ಮನೆ ಕುಳಿತುಕೊಳ್ಳಬಾರದು. ವಕ್ಫ್ ಆಸ್ತಿ ಕುರಿತ ಕಾಯ್ದೆಗೆ ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ತಿದ್ದುಪಡಿಗೆ ಎಲ್ಲರೂ ಬೆಂಬಲ ಸೂಚಿಸಬೇಕು’ ಎಂದರು. ‘ಸಾಕಷ್ಟು ವಕ್ಫ್ ಆಸ್ತಿಗಳಿದ್ದರೂ ಸರ್ಕಾರ 328 ಖಬರ್ಸ್ತಾನಗಳಿಗೆ ಜಾಗ ಒದಗಿಸಿದೆ. ಇದು ಕೂಡಾ ಕಾನೂನು ಬಾಹಿರ’ ಎಂದರು. ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ಸೇನೆಯ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್ ವಿಭಾಗ ಅಧ್ಯಕ್ಷ ಮಧುಸೂದನ ಉರ್ವಸ್ಟೋರ್ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಅರುಣ್ ಕದ್ರಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.