ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಳ್ಳಾಲ ಖಾಜಿಯಾಗಿ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್

Published 21 ಜುಲೈ 2024, 12:31 IST
Last Updated 21 ಜುಲೈ 2024, 12:31 IST
ಅಕ್ಷರ ಗಾತ್ರ

ಉಳ್ಳಾಲ: ಉಳ್ಳಾಲ ಖಾಜಿಯಾಗಿ ಇಂಡಿಯನ್ ಗ್ರಾಂಡ್ ಮುಪ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಖಾಜಿ ಆಯ್ಕೆಗೆ ಸಂಬಂಧಿಸಿ ಉಳ್ಳಾಲ ದರ್ಗಾ ವಠಾರದ ಮದನಿ ಸಭಾಂಗಣದಲ್ಲಿ ಭಾನುವಾರ ಮಧ್ಯಾಹ್ನ ನಡೆದ ಮಹಾಸಭೆಯಲ್ಲಿ ಎ.ಪಿ. ಉಸ್ತಾದ್ ಅವರನ್ನು ಖಾಜಿಯಾಗಿ ನೇಮಕ ಮಾಡಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ.

ಆ.5 ರಂದು ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ಮತ್ತು ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT