ಪುತ್ತೂರು: ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಗ್ರಾಮದ ಕಣಿಯೂರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ.

ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬುವರ ಪುತ್ರಿ ಸಜರಾ (40) ಹಲ್ಲೆಗೊಳಗಾದವರು. ಆಕೆಯ ಪತಿ ಮಡಂತ್ಯಾರು ಸಮೀಪದ ಕೊಲತ್ತಬೈಲು ಮಾಲಾಡಿ ನಿವಾಸಿ ಹಕೀಂ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

ಹಕೀಂ ಮತ್ತು ಸಜರಾ ಅವರು ವಿವಾಹವಾಗಿ 15 ವರ್ಷ ಆಗಿದ್ದು, ವಿವಾಹವಾದ ಕೆಲ ವರ್ಷಗಳ ಬಳಿಕ ಹಕೀಂ ಸಜರಾ ಅವರಿಗೆ ಚಿತ್ರಹಿಂಸೆ ನೀಡಲು ಆರಂಭಿಸಿದ್ದ. ಈ ಕಾರಣದಿಂದ ಸಜರಾ ಅವರು ಮೂರು ವರ್ಷಗಳಿಂದ ಜೋರುಕಟ್ಟೆಯಲ್ಲಿರುವ ತವರು ಮನೆಯಲ್ಲಿ ಮಕ್ಕಳೊಂದಿಗೆ ನೆಲೆಸಿದ್ದರು. ಶುಕ್ರವಾರ ಮಧ್ಯಾಹ್ನ ಚೂರಿ ಹಿಡಿದುಕೊಂಡು ಬಂದಿದ್ದ ಹಕೀಂ ಸಜರಾ ಮೇಲೆ ಹಲ್ಲೆ ನಡೆಸಿದ್ದ. ತಡೆಯಲು ಬಂದ ತಂದೆ ಮೊಹಮ್ಮದ್ ಅವರ ಮೇಲೂ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಹಕೀಂನನ್ನು ಬೆನ್ನಟ್ಟಿ ಪಿಲಿಗೂಡು ಎಂಬಲ್ಲಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಉಪ್ಪಿನಂಗಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡೂ ಕೈ, ಹೊಟ್ಟೆ ಮತ್ತು ಬೆನ್ನಿನ ಭಾಗಕ್ಕೆ ಗಾಯಗಳಾಗಿರುವ ಸಜರಾ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.