ಮಂಗಳೂರು: ರಾಹುಲ್ ಗಾಂಧಿ ದಕ್ಷಿಣ ಕನ್ನಡ ಮಾತ್ರವಲ್ಲ, ಕರ್ನಾಟಕದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತೆರಳಿ ಚುನಾವಣಾ ಪ್ರಚಾರ ಭಾಷಣ ಮಾಡಬೇಕು, ಅವರು ಭೇಟಿ ನೀಡಿದಲ್ಲಿ ಬಿಜೆಪಿಗೆ ಲಾಭವಾಗುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದರು.

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ರಾಹುಲ್ ಗಾಂಧಿ ಎಲ್ಲ ಕಡೆ ಭೇಟಿ ನೀಡಿ ಭಾಷಣ ಮಾಡುವಂತೆ ಕೋರುತ್ತೇನೆ. ಇದರಿಂದ ಬಿಜೆಪಿಗೆ ಯಾವ ತೊಡಕು ಆಗುವುದಿಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿ 150 ಸ್ಥಾನ ಗಳಿಸುತ್ತದೆ.

ಬಿಜೆಪಿ ಲಿಂಗಾಯತ, ವೀರಶೈವ ಎಂದು ವಿಭಜಿಸಿಲ್ಲ. ಆದರೆ, ಕಾಂಗ್ರೆಸ್ ಅವರಿಗೆ ಅವಮಾನ ಮಾಡಿದೆ, ಮಾತ್ರವಲ್ಲ ಕಳೆದ ಬಾರಿ ಸಿದ್ದರಾಮಯ್ಯ ಅವರು ಆ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಕಡಿಮೆ ಅವಧಿಯಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದರೂ ಮೂವರು ಲಿಂಗಾಯತರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದೆ. ಅಲ್ಲದೆ ಮುಂದೆ ಲಿಂಗಾಯತರನ್ನೇ ಸಿಎಂ ಮಾಡುವುದಾಗಿ ಹೇಳಿದೆ. ತಾಕತ್ತಿದ್ದರೆ ಕಾಂಗ್ರೆಸ್ ಲಿಂಗಾಯತರನ್ನು ಸಿಎಂ ಮಾಡುವುದಾಗಿ ಮೊದಲೇ ಘೋಷಣೆ ಮಾಡಲಿ ಎಂದು ಸವಾಲೆಸೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.