ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ನೇತೃತ್ವದಲ್ಲಿ, ಸತ್ಯದೇವತೆ ದೈವಸ್ಥಾನ ಅಳದಂಗಡಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಸಹಕಾರದೊಂದಿಗೆ ಧರ್ಮಸ್ಥಳದ ನೇತ್ರಾವತಿ ಪ್ರಣವ್ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಎಕ್ಸೆಲ್ ಸಂಸ್ಥೆಯು ಶಿಕ್ಷಣದೊಂದಿಗೆ ಸಾಂಸ್ಕೃತಿಕ ಹಾಗೂ ಎಲ್ಲ ರಂಗದ ಕಾರ್ಯಕ್ರಮಗಳ ಆಯೋಜನೆಗೆ ನೀಡುತ್ತಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ, ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಸಂಘಟಕ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕಿರಣ್ ಶೆಟ್ಟಿ ಬೆಳ್ತಂಗಡಿ, ಕರ್ನಾಟಕ ಜಾನಪದ ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಬೇಬಿ ಪೂಜಾರಿ ಪುಣ್ಕೆತ್ಯಾರು, ಶಾರದಾ ಶೆಟ್ಟಿ ಅಳದಂಗಡಿ, ರಂಜನ್ ನೆರಿಯ, ಅರುಣ್ ಅಳದಂಗಡಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.