ಮಂಗಳೂರು: ರಕ್ತದಾನ ಶಿಬಿರ, ಸಾಂಸ್ಕೃತಿಕ ಸೊಬಗು, ವಾಕಥಾನ್ ಮತ್ತಿತರ ಚಟುವಟಿಕೆಗಳೊಂದಿಗೆ ಬ್ಯಾಂಕ್ ಆಫ್ ಬರೋಡಾದ 117ನೇ ಸಂಸ್ಥಾಪನಾ ದಿನಾಚರಣೆ ನಡೆಯಿತು.

ಭಾರತೀಯ ರೆಡ್ ಕ್ರಾಸ್ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಬ್ಯಾಂಕ್ ಆಫ್ ಬರೋಡಾದ ವಲಯ ಕಚೇರಿ ಡಾ. ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೆಲ್, ಹಂಪನಕಟ್ಟೆ ಮತ್ತು ಕಚೇರಿಗೆ ವಾಕಥಾನ್ ನಡೆಸಲಾಯಿತು.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಿಐಎಸ್ಎಫ್ನ ಕಮಾಂಡೆಂಟ್ ವೀರೇಂದ್ರ ಮೋಹನ ಜೋಶಿ ಮತ್ತು ಬ್ಯಾಂಕ್ನ ವಲಯ ಮುಖ್ಯಸ್ಥ ರಾಜೇಶ್ ಖನ್ನಾ ಧ್ವಜಾರೋಹಣ ನೆರವೇರಿಸಿದರು.

ಉಪ ಪ್ರಧಾನ ವ್ಯವಸ್ಥಾಪಕರಾದ ರಮೇಶ್ ಕಾನಡೆ, ಅಶ್ವಿನಿ ಕುಮಾರ್, ರಾಜಶೇಖರ್, ಪ್ರಾದೇಶಿಕ ವ್ಯವಸ್ಥಾಪಕರಾದ ಸನಿಲ್ ಕುಮಾರ್, 300ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದರು. ಯಕ್ಷಗಾನ, ಶಾಸ್ತ್ರೀಯ ನೃತ್ಯ, ಹುಲಿ ಕುಣಿತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬೆಂದೂರಿನ ಸೇಂಟ್ ಸೆಬಾಸ್ಟಿಯನ್ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿತ್ತು. ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಪಿ.ಎಲ್.ಧರ್ಮ ಭಾಗವಹಿಸಿದ್ದರು. ಬ್ಯಾಂಕ್ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಆರ್.ಶೆಣೈ ಮಾತನಾಡಿದರು.

ಸಾನಿಧ್ಯ ಶಾಲೆ, ಅಭಯ ಆಶ್ರಮ ಮೊದಲಾದ ಕಡೆಗಳಲ್ಲಿ ಸಿಎಸ್ಆರ್ ನಿಧಿಯಲ್ಲಿ ನೆರವು ನೀಡಿದ್ದನ್ನು ಸ್ಮರಿಸಲಾಯಿತು. ಸಸಿ ನೆಡುವ ಮೂಲಕ ಹಸಿರು ಹೆಚ್ಚಿಸುವ, ಟ್ರಾಫಿಕ್ ಪೊಲೀಸರು, ಭದ್ರತಾ ಸಿಬ್ಬಂದಿಗೆ ಛತ್ರಿ ವಿತರಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.