ಮಂಗಳೂರು: ಬಿಜೆಪಿ ಸಚಿವರ ಮೇಲೆ ಶೇ 40ರಷ್ಟು ಕಮಿಷನ್ ಬಗ್ಗೆ ಆರೋಪ ಮಾಡುವವರು ಸಾಕ್ಷಿ ಒದಗಿಸಿ ಮಾತನಾಡಲಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ಗುರುವಾರ ಸವಾಲು ಹಾಕಿದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಕ್ಕಳಿಗೆ ನೀಡುವ ಮೊಟ್ಟೆ ಯೋಜನೆಯಲ್ಲಿ ಕಾಂಗ್ರೆಸ್ಸಿಗರು ಹಣ ಮಾಡಿದ್ದಾರೆ. ಇದನ್ನು ಕಾಂಗ್ರೆಸ್ ಸರ್ಕಾರದಲ್ಲಿ ಸಚಿವೆಯಾಗಿದ್ದ ಜಯಮಾಲಾ ಅವರೇ ಹೇಳಿದ್ದಾರೆ. ಆಡಳಿತಾವಧಿಯಲ್ಲಿ ಶೇ 80ರಷ್ಟು ಕಮಿಷನ್ ಹೊಡೆದ, ನೆರೆ ಪರಿಹಾರ ನಿಧಿಯನ್ನೇ ಲೂಟಿ ಮಾಡಿದ ಕಾಂಗ್ರೆಸ್ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’ ಎಂದರು.

‘ಈದ್ಗಾ ಮೈದಾನ ಸರ್ಕಾರದ ಸ್ವತ್ತು. ಸರ್ಕಾರಿ ಜಾಗಗಳಲ್ಲಿ ಎಲ್ಲಿ ಬೇಕಾದರೂ ಗಣೇಶೋತ್ಸವ ಆಚರಿಸಲು ಸಾರ್ವಜನಿಕರಿಗೆ ಅವಕಾಶವಿದೆ. ಗಣೇಶೋತ್ಸವ ಆಚರಣೆಗೆ ಅರ್ಜಿ ಸಲ್ಲಿಸಿದರೆ, ಸರ್ಕಾರ ಅವಕಾಶ ನೀಡುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.