ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಕೇಂದ್ರ ರಕ್ಷಣಾ ಸಚಿವರಾದ ರಾಜ್ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ.

ಈ ಸಲಹಾ ಸಮಿತಿಯೂ ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನದ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತು ಸಲಹೆ ನೀಡಲಿದೆ.ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಮಾರ್ಗದರ್ಶನ ಮಾಡಲಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ "ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿದೆ. ಇಂತಹ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನಿವೃತ್ತ ಯೋಧನಾದ ನನಗೆ ಗೌರವದವಿಚಾರ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.