ಮಂಗಳೂರು: ಕೆಫೆ ಕಾಫಿಡೇ ಸಂಸ್ಥಾಪಕ ವಿ.ಜಿ. ಸಿದ್ದಾರ್ಥ ಅವರು ನೇತ್ರಾವತಿ ನದಿಯ ಉಳ್ಳಾಲ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡು ಒಂದು ವರ್ಷವಾಗುತ್ತಿದೆ. ಆದರೆ, ಅವರ ಆತ್ಮಹತ್ಯೆಯ ಹಿಂದಿನ ಕಾರಣಗಳ ತನಿಖೆ ಮಾತ್ರ ಇನ್ನೂ ಪ್ರಾರಂಭಿಕ ಹಂತದಲ್ಲಿಯೇ ಉಳಿದಿದೆ.

ಎಸಿಪಿ ಕೋದಂಡರಾಮ್ ನೇತೃತ್ವದ ತನಿಖಾ ತಂಡವು ವಿವಿಧ ಆಯಾಮಗಳಿಂದ ತನಿಖೆ ನಡೆಸಿ, 2019 ರ ಆಗಸ್ಟ್ 26ರಂದು ಅಂತಿಮ ವರದಿಯನ್ನು ಸಲ್ಲಿಸಿತ್ತು. ಸಿದ್ದಾರ್ಥ ಅವರು ಉಸಿರುಗಟ್ಟಿ ಮೃತಪಟ್ಟಿದ್ದು, ಆತ್ಮಹತ್ಯೆಯಿಂದಾಗಿ ಸಾವು ಸಂಭವಿಸಿದೆ ಎಂದು ವರದಿ ಹೇಳಿದೆ. ಆದರೆ, ಆತ್ಮಹತ್ಯೆ ಹಿಂದಿನ ಕಾರಣಗಳು ಮಾತ್ರ ಇನ್ನೂ ಪತ್ತೆಯಾಗಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ವಿಕಾಸ್‌ಕುಮಾರ್ ವಿಕಾಶ್, ‘ಸಿದ್ದಾರ್ಥ ಆತ್ಮಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಇದನ್ನು ಬಿಟ್ಟು ಹೆಚ್ಚಿಗೆ ಏನನ್ನೂ ಹೇಳಲಾಗದು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.