ಮಂಗಳೂರು: ಮಾಸ್ಕ್ ಧರಿಸದೆ, ಕೋವಿಡ್ ನಿಯಮ ಉಲ್ಲಂಘಿಸಿದ ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರು ಸೂಪರ್ ಮಾರ್ಕೆಟ್ ಸಿಬ್ಬಂದಿ ತರಾಟೆಯೊಂದಿಗೆ ವಾಗ್ವಾದ ನಡೆಸಿದ್ದಾರೆ.

ಮಾಸ್ಕ್ ಧರಿಸದೇ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ನಗರದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರ ಬೆಳಿಗ್ಗೆ ನಗರದ ಸೂಪರ್ ಮಾರ್ಕೆಟ್ನಲ್ಲಿ ಈ ಘಟನೆ ನಡೆದಿದ್ದು, ಫೋನಿನಲ್ಲಿ ಮಾತಾಡುತ್ತಿದ್ದ ಡಾ. ಕಕ್ಕಿಲಾಯ, ಮಾಸ್ಕ್ ಹಾಕದೆ ಬಿಲ್ ಕೌಂಟರ್ ಬಳಿ ನಿಂತಿದ್ದರು. ಇದನ್ನು ಗಮನಿಸಿದ ಅಲ್ಲಿನ ಸಿಬ್ಬಂದಿಯೊಬ್ಬರು ಅವರಿಗೆ ಕೋವಿಡ್ ನಿಯಮದ ಬಗ್ಗೆ ಪಾಠ ಮಾಡಿದ್ದಾರೆ.

ದಯವಿಟ್ಟು ಮಾಸ್ಕ್ ಧರಿಸಿ, ಇಲ್ಲಿ ಎಲ್ಲರಿಗೂ ಒಂದೇ ನಿಯಮ ಇರುವುದು ಎಂದಿದ್ದಾರೆ. ಇದಕ್ಕೆ ಡಾ.ಕಕ್ಕಿಲಾಯ ಮತ್ತೆ ವಾಗ್ವಾದಕ್ಕೆ ಇಳಿದು, ಮಾಸ್ಕ್ ಧರಿಸಲು ನಿರಾಕರಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸೂಪರ್ ಮಾರ್ಕೆಟ್ ಸಿಬ್ಬಂದಿ ಬುಧವಾರ ಮಧ್ಯಾಹ್ನ 2.30ಕ್ಕೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.

ನಿಯಮ ಉಲ್ಲಂಘಿಸಿದ್ದಲ್ಲದೇ, ಸರ್ಕಾರದ ಮಾರ್ಗಸೂಚಿಗಳನ್ನೇ ಪ್ರಶ್ನಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.