ಮಂಗಳೂರು: ‘ಅಪೌಷ್ಠಿಕತೆ ಹಾಗೂ ಆರೋಗ್ಯ ಸಮಸ್ಯೆಯ ನಿವಾರಣೆಗೆ ಔಷಧೀಯ ಗುಣಗಳನ್ನು ಹೊಂದಿರುವ ಭತ್ತದ ತಳಿಗಳನ್ನು ಹೆಚ್ಚಾಗಿ ಬೆಳೆಯಬೇಕು. ಕೃಷಿ ವಿಜ್ಞಾನ ಕೇಂದ್ರವು ಔಷಧೀಯ ಹಾಗೂ ಸುಗಂಧಿತ ಗುಣಗಳಿರುವ ಭತ್ತದ ತಳಿಗಳನ್ನು ರೈತರಿಗೆ ಒದಗಿಸಲಿದೆ’ ಎಂದು ಕೇಂದ್ರದ ಮುಖ್ಯಸ್ಥ ಟಿ. ಜೆ.ರಮೇಶ ತಿಳಿಸಿದರು.

ಎಕ್ಕೂರಿನಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಏರ್ಪಡಿಸಿದ್ದ ಸಾಂಪ್ರದಾಯಿಕ ಭತ್ತದ ತಳಿಗಳ ಅಧ್ಯಯನದ ಕ್ಷೇತ್ರೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘650ಕ್ಕೂ ಹೆಚ್ಚು ಭತ್ತದ ತಳಿಗಳನ್ನು ಸಂರಕ್ಷಿಸಿರುವ 'ಪದ್ಮಶ್ರೀ' ಪ್ರಶಸ್ತಿ ಪುರಸ್ಕೃತ ಸತ್ಯನಾರಾಯಣ ಬೆಳೇರಿ ಅವರಿಂದ ಸಾಂಪ್ರದಾಯಿಕ ಔಷಧೀಯ ಹಾಗೂ ಸುಗಂಧಿತ ಗುಣಗಳಿರುವ 10 ಭತ್ತದ ತಳಿಗಳನ್ನು ಪಡೆದು, ಕೃಷಿ ವಿಜ್ಞಾನ ಕೇಂದ್ರದ ಪ್ರಾಯೋಗಿಕ ತಾಕುಗಳಲ್ಲಿ ವೈಜ್ಞಾನಿಕವಾಗಿ ಪರೀಕ್ಷಿಸಲಾಗುತ್ತಿದೆ. ಇವುಗಳಲ್ಲಿ ಈ ಕರಾವಳಿ ಪ್ರದೇಶಕ್ಕೆ ಹೊಂದಿಕೊಳ್ಳುವ ಹಾಗೂ ರೈತರು ಬಯಸುವ ತಳಿಗಳನ್ನು ಇನ್ನಷ್ಟು ಪ್ರಮಾಣದಲ್ಲಿ ಬೆಳೆಸಲಿದ್ದೇವೆ’ ಎಂದರು.

ಕೃಷಿ ವಿಜ್ಞಾನ ಕೇಂದ್ರದ ತಾಕುಗಳಲ್ಲಿ ಬೆಳೆಸಿರುವ ಸಾಂಪ್ರದಾಯಿಕ ಭತ್ತದ ತಳಿಗಳ ವಿಶೇಷತೆ ಬಗ್ಗೆ ಮಾಹಿತಿ ನೀಡಿದ ಸತ್ಯನಾರಾಯಣ ಬೆಳೇರಿ, ‘ಆಯಾ ಪ್ರದೇಶಕ್ಕೆ ಸೂಕ್ತವಾದ ತಳಿಗಳನ್ನು ಆಯ್ಕೆ ಮಾಡಬೇಕು. ಈ ತಳಿಗಳಿಂದ ರೈತರಿಗೆ ಹಾಗೂ ಸಾಮಾನ್ಯ ಜನರಿಗೆ ಪ್ರಯೋಜನ ಸಿಗಬೇಕು. ಈ ನಿಟ್ಟಿನಲ್ಲಿ ವಿಜ್ಞಾನಿಗಳಿಗೆ ರೈತರ ಸಹಕಾರ ತುಂಬಾ ಮುಖ್ಯ’ ಎಂದರು.

ಮಣ್ಣು ವಿಜ್ಞಾನಿ ಮಲ್ಲಿಕಾರ್ಜುನ ಎಲ್. ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜ್ಞಾನಿ ಹರೀಶ್ ಶೆಣೈ ಸ್ವಾಗತಿಸಿದರು. ಕೇದಾರನಾಥ ವಂದಿಸಿದರು. ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಮನೋಹರ ಶೆಟ್ಟಿ, ಪ್ರಗತಿಪರ ಕೃಷಿಕರಾದ ಕೆನ್ಯೂಟ್ ಅರೆನ್ಹಾ, ಕೇಶವ ಶೆಟ್ಟಿ, ಜಯಶೀಲ ಶೆಟ್ಟಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಮೋಹನ್ ಕುಮಾರ, ತೋಟಗಾರಿಕೆ ವಿಜ್ಞಾನಿ ರಶ್ಮಿ ಹಾಗೂ ಇತರ ಸಿಬ್ಬಂದಿ ಭಾಗವಹಿಸಿದ್ದರು.

ಸಹ್ಯಾದ್ರಿ ಕೆಂಪುಮುಕ್ತಿ ಭತ್ತದ ಪ್ರಾತ್ಯಕ್ಷಿಕೆ

ಕರಾವಳಿ ಪ್ರದೇಶಕ್ಕಾಗಿ ಕೃಷಿ ವಿಜ್ಞಾನ ಕೇಂದ್ರವು ಅಭಿವೃದ್ಧಿಪಡಿಸಿರುವ ಸಹ್ಯಾದ್ರಿ ಕೆಂಪುಮುಕ್ತಿ ಭತ್ತದ ತಳಿಯ ಬಗ್ಗೆ ಕ್ಷೇತ್ರೋತ್ಸವದಲ್ಲಿ ಪ್ರಾತ್ಯಕ್ಷಿಕೆ ನೀಡಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭತ್ತದ ಕೃಷಿ ಕುರಿತು ಸಮಗ್ರ ಚಿತ್ರಣ ನೀಡಿದ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞ ಹರೀಶ ಶೆಣೈ ಸಹ್ಯಾದ್ರಿ ಕೆಂಪು ಮುಕ್ತಿ ಭತ್ತದ ತಳಿ ಹೇಗೆ ಇಲ್ಲಿನ ವಾತಾವರಣಕ್ಕೆ ಹೊಂದಿಕೆಯಾಗುತ್ತದೆ. ಅದರ ವಿಶೇಷತೆಗಳೇನು ಎಂದು ವಿವರಿಸಿದರು. ಭತ್ತದಲ್ಲಿ ಅಧಿಕ ಇಳುವರಿ ಪಡೆಯಲು ಅನುಸರಿಸಬೇಕಾದ ಬೇಸಾಯ ಕ್ರಮಗಳ ಕುರಿತು ಮಾರ್ಗದರ್ಶನ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.