ಮಂಗಳೂರು: ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಬದಲಾಗಿರುವ ಆರೋಪಕ್ಕೆ ಸಂಬಂಧಿಸಿ, ಮಗು, ತಂದೆ ಹಾಗೂ ತಾಯಿಯ ಡಿಎನ್‌ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ ನೀಡಿದೆ.

ಮಗು ಅದಲು ಬದಲು ಆಗಿದೆ ಎಂದು ಆರೋಪಿಸಿ ಕುಂದಾಪುರ ನಿವಾಸಿ ಮುಸ್ತಫಾ ಎಂಬುವರು ನೀಡಿದ ದೂರಿನ ಆಧಾರದಲ್ಲಿ ಬಂದರು ಪೊಲೀಸ್ ಠಾಣೆಯಲ್ಲಿ ಮಗು ಅಪಹರಣ ದೂರು ದಾಖಲಾಗಿತ್ತು.

ನ್ಯಾಯಾಲಯ ನೀಡಿದ ಸೂಚನೆ ಆಧಾರದಲ್ಲಿ ಅ.19ರಂದು ಮಗು ಹಾಗೂ ಪೋಷಕರ ಡಿಎಎನ್ ಪರೀಕ್ಷೆಯಾಗಲಿದೆ. ಇದರ ಸ್ಯಾಂಪಲ್ ಅನ್ನು ಹೈದ್ರಾಬಾದ್ ಅಥವಾ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ಮೂರು ತಿಂಗಳೊಳಗೆ ಇದರ ವರದಿ ಬರಲಿದ್ದು, ಈ ವರದಿ ಆಧಾರದಲ್ಲಿ ಮುಂದಿನ ತನಿಖೆ ನಡೆಯಲಿದೆ ಎಂದು ಬಂದರು ಪೊಲೀಸರು ತಿಳಿಸಿದ್ದಾರೆ.

ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆಯ ಸಂದರ್ಭ ಹೆಣ್ಣು ಮಗು ಎಂದು ದಾಖಲೆಯಲ್ಲಿ ನಮೂದಿಸಿ, ನಂತರ ಪೋಷಕರಿಗೆ ಗಂಡು ಮಗುವನ್ನು ನೀಡಿದ್ದಾರೆ ಎಂದು ಆರೋಪಿಸಿ, ಮಗುವಿನ ಪೋಷಕರು ನಗರದ ಬಂದರು ಪೊಲೀಸ್ ಠಾಣೆಗೆ ದೂರು ನೀಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.