ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಶೇ 95ರಷ್ಟು ಮಕ್ಕಳಿಗೆ ಭಾನುವಾರ ಪಲ್ಸ್ ಪೋಲಿಯೊ ಹನಿ ಹಾಕಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

‘ಜಿಲ್ಲೆಯಲ್ಲಿ ಪಲ್ಸ್ ಪೋಲಿಯೊ ಹನಿ ಹಾಕಿಸಲು ಒಟ್ಟು 1,43,252 ಮಕ್ಕಳನ್ನು ಗುರುತಿಸಲಾಗಿತ್ತು. ಅವರಲ್ಲಿ 1,36,280 ಮಕ್ಕಳಿಗೆ ಪಲ್ಸ್ ಪೋಲಿಯೊ ಅಭಿಯಾನದ ಮೊದಲ ದಿನವೇ ಹನಿ ಹಾಕಲಾಗಿದೆ. 1,29,911 ಮಕ್ಕಳಿಗೆ ಪಲ್ಸ್ ಪೋಲಿಯೊ ಬೂತ್‌ಗಳಲ್ಲಿ ಹನಿ ಹಾಕಲಾಗಿದೆ. ನಗರದಲ್ಲಿ 705 ಮಕ್ಕಳಿಗೆ ಮನೆಗಳ ಬಳಿ ಹಾಗೂ ಬಸ್‌ನಿಲ್ದಾಣ ರೈಲ್ವೆ ನಿಲ್ದಾಣ ಮತ್ತಿತರ ಸಂಚಾರ ತಾಣಗಳಲ್ಲಿ , ಮಾಲ್‌ಗಳ ಬಳಿ ಹಾಗೂ ಮಾರುಕಟ್ಟೆಗಳ ಬಳಿ 5,664 ಮಕ್ಕಳಿಗೆ ಹನಿ ಹಾಕಲಾಗಿದೆ.’

‘ಪುತ್ತೂರು (ಶೇ 104.1) ಮತ್ತು ಸುಳ್ಯ (ಶೇ 103.3) ತಾಲ್ಲೂಕುಗಳಲ್ಲಿ ಗುರಿ ಮೀರಿದ ಸಾಧನೆ ಆಗಿದೆ. ಉಳಿದಂತೆ ಬಂಟ್ವಾಳ ತಾಲ್ಲೂಕಿನಲ್ಲಿ ಶೇ 96.9, ಬೆಳ್ತಂಗಡಿ ತಾಲ್ಲೂಕಿನಲ್ಲಿ ಶೇ 95ರಷ್ಟು, ಮಂಗಳೂರು ತಾಲ್ಲೂಕಿನಲ್ಲಿ ಶೇ 90.5ರಷ್ಟು ಮಕ್ಕಳಿಗೆ ಹನಿ ಹಾಕಲಾಗಿದೆ’ ಎಂದು ಇಲಾಖೆ ಮಾಹಿತಿ ನೀಡಿದೆ.

‘ಅಭಿಯಾನದ ಮೊದಲ ಹಂತದಲ್ಲಿ ಪಲ್ಸ್ ಪೋಲಿಯೊ ಹನಿ ಹಾಕಿಸಿಕೊಳ್ಳದ ಐದು ವರ್ಷಗಳ ಒಳಗಿನ ಮಕ್ಕಳಿಗೆ ಆರೋಗ್ಯ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಹನಿ ಹಾಕಲಿದ್ದಾರೆ. ನಗರ ಪ್ರದೇಶಗಳಲ್ಲಿ ಸೋಮವಾರ, ಮಂಗಳವಾರ ಹಾಗೂ ಬುಧವಾರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೋಮವಾರ ಮತ್ತು ಮಂಗಳವಾರ ಆರೋಗ್ಯ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಲಿದ್ದು, ಸಾರ್ವಜನಿಕರು ಸಹಕರಿಸಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಮ್ಮಯ್ಯ ಅವರು ಕೋರಿದರು.

ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಪಾಲಿಕೆ ಸದಸ್ಯೆ ಪೂರ್ಣಿಮಾ ಚಾಲನೆ ನೀಡಿದರು. ಡಾ. ತಿಮ್ಮಯ್ಯ, ವೆನ್‌ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಅಧೀಕ್ಷಕಿ ಡಾ.ಜೆಸಿಂತಾ, ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾಪ್ರಸಾದ್, ಆರ್.ಸಿ.ಎಚ್.ಅಧಿಕಾರಿ ಡಾ.ರಾಜೇಶ್, ಡಾ.ಸದಾಶಿವ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಭಾಗವಹಿಸಿದ್ದರು.

ಪಲ್ಸ್ ಪೋಲಿಯೊ ಅಭಿಯಾನ– ತಾಲ್ಲೂಕುವಾರು ವಿವರ ತಾಲ್ಲೂಕು;ಗುರುತಿಸಿದ್ದ ಮಕ್ಕಳು;ಹನಿ ಹಾಕಿದ್ದು ಬಂಟ್ವಾಳ;30651;28808 ಬೆಳ್ತಂಗಡಿ;18483;16893 ಮಂಗಳೂರು;65385;56435

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.