ಮಂಗಳೂರು: ಮೀನು ಫಸಲು ಹೆಚ್ಚಳಕ್ಕೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿಯಲ್ಲಿ 56 ಸ್ಥಳಗಳಲ್ಲಿ ಕೃತಕ ಬಂಡೆ (Artificial reef) ಗಳನ್ನು ಅಳವಡಿಸಲಾಗುವುದು.

ಇದಕ್ಕೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಒಟ್ಟು ₹17.36 ಕೋಟಿ ಮಂಜೂರಾಗಿದೆ. ಇದರಲ್ಲಿ ಕರ್ನಾಟಕದ ಪಾಲು ₹6.94 ಕೋಟಿ ಹಾಗೂ ಕೇಂದ್ರದ ಪಾಲು ₹10.41 ಕೋಟಿ ಇದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ ಅವರು ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯನ್ನು ಅನುಷ್ಠಾನ ಏಜೆನ್ಸಿಯಾಗಿ ನೇಮಿಸಲಾಗಿದೆ. ಸಿಎಂಎಫ್‌ಆರ್‌ಐ ಸಂಸ್ಥೆಯ ವಿಜ್ಞಾನಿಗಳು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ 3 ಜಿಲ್ಲೆಗಳ ಪಾಲುದಾರರ ಮತ್ತು ಅಧಿಕಾರಿಗಳ ಸಭೆ ನಡೆಸಿ ಈ ಕಾರ್ಯಕ್ರಮದ ಅಗತ್ಯ ಮತ್ತು ಅನುಕೂಲದ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಸಮುದ್ರದಲ್ಲಿ 56 ಕಡೆಗಳಲ್ಲಿ ಕೃತಕ ಬಂಡೆಗಳನ್ನು ನಿರ್ಮಿಸಿ ಅಳವಡಿಸುವ ಕಾರ್ಯ ಆರಂಭವಾಗಬೇಕಿದೆ. ಈ ವಿಧಾನ ತಮಿಳುನಾಡಿನಲ್ಲಿ ಪರಿಣಾಮಕಾರಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.