ಮೂಲ್ಕಿ: ಇಲ್ಲಿನ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ತಾಯಿ ಹಾಗೂ ಮಗುವನ್ನು ಕೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಶನಿವಾರ ಗೊತ್ತಾಗಿದೆ.

ಹಳೆಯಂಗಡಿ ಬಳಿಯಲ್ಲಿ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದೆ. ಆತ ತನ್ನ ಪತ್ನಿ ಶಿವಮೊಗ್ಗ ಮೂಲದ ಪ್ರಿಯಾಂಕಾ (28) ಗಂಡು ಮಗು ಹೃದಯ (4) ಇವರಿಗೆ ವಿಷ ನೀಡಿ ಹತ್ಯೆ ಮಾಡಿ, ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ಭಟ್ ಪಕ್ಷಿಕೆರೆ ಮುಖ್ಯ ಜಂಕ್ಷನ್ ನಲ್ಲಿರುವ ಹೋಟೆಲ್ ಅನ್ನು ತನ್ನ ತಂದೆ ತಾಯಿಯೊಂದಿಗೆ ನಡೆಸುತ್ತಿದ್ದರು. ಹತ್ತಿರದ ಫ್ಲ್ಯಾಟ್ ಒಂದರಲ್ಲಿ ವಾಸವಾಗಿದ್ದರು.

ಈ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಮೂವರ ಸಾವು ಹಾಗೂ ಅದರ ಹಿಂದಿನ ಕಾರಣಗಳ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ಸಿಗಬೇಕಾಗಿದೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.