ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರವೂ ಮಳೆ ಮುಂದುವರಿದಿದೆ. ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ನಗರವೂ ಸೇರಿದಂತೆ ಜಿಲ್ಲೆಯ ಹಲವೆಡೆ ರಸ್ತೆಗಳು ಜಲಾವೃತವಾಗಿದ್ದವು.

ನಿರಂತರ ಮಳೆಯ ಪರಿಣಾಮ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು, ಕುಂಟಿಕಾನ ಬಳಿ ರಸ್ತೆಯ ಪಕ್ಕ ಕುಸಿತವಾಗಿದೆ.

ನಗರದಲ್ಲಿ ಗುರುವಾರ ರಾತ್ರಿಯೂ ನಿರಂತರ ಮಳೆಯಾಗಿದೆ. ಕೊಟ್ಟಾರ ಚೌಕಿ, ಅಳಕೆ, ಅಶೋಕ್ ನಗರ, ಪಾಂಡೇಶ್ವರ ಭಾಗದಲ್ಲಿ ನೀರು ನಿಂತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿದೆ.

ಕುಂಟಿಕಾನ ಬಳಿಯ ಬೋಂದೆಲ್‌ಗೆ ತೆರಳುವ ರಸ್ತೆಯ ಪಕ್ಕದಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದ ಭಾಗಶಃ ರಸ್ತೆಗೆ ಹಾನಿಯಾಗಿದೆ.

ನಗರದ ದೇರೆಬೈಲ್ ಬಳಿ ರಸ್ತೆ ಬದಿಯ ಗೋಡೆ ಕುಸಿದು ಬಿದ್ದಿದೆ. ಹಲವು ಕಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.