ಸುಬ್ರಹ್ಮಣ್ಯ: ರಾಜ್ಯ ಹೆದ್ದಾರಿಯ ಸುಬ್ರಹ್ಮಣ್ಯ-ಧರ್ಮಸ್ಥಳ ಬಿಳಿನೆಲೆ ಕೈಕಂಬ ಜಂಕ್ಷನ್ನಲ್ಲಿ ರಸ್ತೆ ಬದಿಯ ಬೃಹತ್ ಮರ ಉರುಳಿ ಇಬ್ಬರು ಗಾಯಗೊಂಡು, ಅಂಗಡಿ, ವಾಹನ ಜಖಂಗೊಂಡ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ರಸ್ತೆಯಲ್ಲಿ ಸಾಗುತ್ತಿದ್ದ, ನೆಟ್ಟಣದ ಶೇಖರ್ ಎಂಬುವರು ಚಲಾಯಿಸುತ್ತಿದ್ದ ಟಾಟಾ ಸುಮೊ ವಾಹನದ ಮೇಲೆ ಮರ ಬಿದ್ದು, ಶೇಖರ್ ಅವರ ತಲೆಗೆ ಗಾಯವಾಗಿದೆ. ವಾಹನ ಸಂಪೂರ್ಣ ಜಖಂಗೊಂಡಿದೆ. ಅಂಗಡಿಯಲ್ಲಿದ್ದ ರಾಜೇಶ್ ಎಂಬುವರ ಕಾಲಿಗೂ ಗಾಯವಾಗಿದ್ದು, ಅಂಗಡಿಯೂ ಜಖಂಗೊಂಡಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ವಿದ್ಯುತ್ ಕಂಬಗಳಿಗೂ ಹಾನಿಯಾಗಿದೆ. ಕಡಬ ತಹಶೀಲ್ದಾರ್ ಪ್ರಭಾಕರ ಕಜೂರೆ, ಉಪತಹಶೀಲ್ದಾರ್ ಮನೋಹರ್, ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು, ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿ ಪರಿಶೀಲನೆ ನಡೆಸಿದರು. ಸ್ಥಳೀಯರ ಸಹಕಾರದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಮರ ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಲಾಯಿತು.

ಪರಿಹಾರಕ್ಕೆ ಆಗ್ರಹ: ಮರ ಬಿದ್ದು ಗಾಯಗೊಂಡಿರುವವರಿಗೆ ಸರ್ಕಾರದಿಂದ ಪರಿಹಾರ ಒದಗಿಸುವಂತೆ ಹಾಗೂ ರಸ್ತೆ ಬದಿಯ ಅಪಾಯಕಾರಿ ಮರ ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದರು.

ಅಧಿಕಾರಿಗಳು ಸ್ಥಳೀಯರ ಜತೆ ಮಾತುಕತೆ ನಡೆಸಿ, ಸರ್ಕಾರದಿಂದ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸುವ ಭರವಸೆ ನೀಡಿದರು. ಅಪಾಯಕಾರಿ ಮರಗಳ ತೆರವಿಗೆ ಗ್ರಾಮ ಪಂಚಾಯಿತಿ ಮೂಲಕ ಮನವಿ ಬಂದರೆ ತೆರವಿಗೆ ಕ್ರಮಕೈಗೊಳ್ಳಲಾಗುವುದು ಎಂದು ಅರಣ್ಯಾಧಿಕಾರಿ ವಿಮಲ್ ಬಾಬು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.