ಮೂಡುಬಿದಿರೆ: ‘ರಾಜ್ಯದಲ್ಲಿರುವುದು ಡಬಲ್ ಎಂಜಿನ್ ಸರ್ಕಾರ ಅಲ್ಲ, ಡಿಫೆಕ್ಟಿವ್ ಎಂಜಿನ್ ಸರ್ಕಾರ. ಅಭಿವೃದ್ಧಿ ವಿಷಯ ಇದ್ದರೆ ಚಾಲೆಂಜ್ ಮಾಡಲಿ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು.

ಶನಿವಾರ ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಸಮಾಜದ ನಿರ್ದಿಷ್ಟ ಸಮುದಾಯದವರ ಹಬ್ಬಗಳಿಗೆ ಮೂರು ಸಿಲಿಂಡರ್ ಕೊಡುವುದಾಗಿ ಹೇಳುವ ಬಿಜೆಪಿಯ ಪ್ರಣಾಳಿಕೆಯಲ್ಲಿ ಉಳಿದ ಶೇ 20ದಷ್ಟಿರುವ ಅಲ್ಪಸಂಖ್ಯಾತರ ಹಬ್ಬಗಳಿಗೆ ಸಿಲಿಂಡರ್ ಇಲ್ಲವೇ? ಮತ ಯಾಚನೆಯ ವೇಳೆ ಮಾತ್ರ ನಿಮಗೆ ಅಲ್ಪಸಂಖ್ಯಾತರ ನೆನಪಾಗುತ್ತಿದೆ’ ಎಂದು ಟೀಕಿಸಿದರು.

‘ಮೋದಿ ಸರ್ಕಾರ ಬಂದ ಬಳಿಕ ಹಾಕಲಾಗುತ್ತಿರುವ ಜಿಎಸ್ಟಿಯಿಂದ ಜನ ಹೈರಾಣಾಗಿದ್ದಾರೆ. ಉಪ್ಪು, ಹಾಲು, ಮೊಸರು ಹೀಗೆ ಜನರ ದಿನಬಳಕೆಯ ವಸ್ತುಗಳ ಮೇಲೆ ಜಿಎಸ್ಟಿ ವಿಧಿಸಿದ್ದು, ಜನ ಬೆಲೆಯೇರಿಕೆಯಿಂದ ತತ್ತರಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಕಾಮಗಾರಿಗಳಲ್ಲಿ ಶೇ 40 ಕಮಿಶನ್ ಆರೋಪವಿರುವಂತೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲೂ ನಡೆದಿದೆ‘ ಎಂದವರು ಆರೋಪಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಮಹಿಳಾ ಕಾಂಗ್ರೆಸ್ ಅಧ್ಯ್ಯಕ್ಷೆ ಸುಪ್ರಿಯಾ ಡಿ. ಶೆಟ್ಟಿ, ವಕ್ತಾರ ರಾಜೇಶ್ ಕಡಲಕೆರೆ, ಕಾಂಗ್ರೆಸ್ ಬೆಂಬಲಿತ ಪುರಸಭೆ ಸದಸ್ಯರು ಇದ್ದರು.

ಶಾಸಕರ ವಿರುದ್ಧ ಮಾತನಾಡಿದ್ದಕ್ಕೆ ಬೆದರಿಕೆ ಕರೆ ಬರುತ್ತಿದೆ : ಅಭಯಚಂದ್ರ ಜೈನ್

‘ಚುನಾವಣೆಯಲ್ಲಿ ಶಾಸಕರ ವಿರುದ್ಧ ಮಾತನಾಡುತ್ತಿರುವುದಕ್ಕೆ ನನಗೆ ವಿದೇಶದಿಂದ ಬೆದರಿಕೆ ಕರೆಗಳು ಬರುತ್ತಿದೆ. ಈ ಹಿಂದೆ ಪ್ರಶಾಂತ ಪೂಜಾರಿ ಕೊಲೆ ಪ್ರಕರಣದಲ್ಲೂ ಇದೇ ರೀತಿ ಬೆದರಿಕೆ ಹಾಕಲಾಗಿತ್ತು. ಇಂತಹ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ಕೂಡ ನೀಡುವುದಿಲ್ಲ. ಯಾರ ಸಾವು ಹೇಗೆ ಸಂಭವಿಸುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ‘ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.