ಉಜಿರೆ: ‘ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಸೇವೆ, ಸಾಧನೆ ಮತ್ತು ಆದರ್ಶ ಅನುಕರಣೀಯ’ ಎಂದು ಹೈದರಾಬಾದ್ನಲ್ಲಿರುವ ಯುನಿಸೆಫ್ ಕಾರ್ಯಾಲಯದ ಮುಖ್ಯಸ್ಥ ಝೆಲಿಮ್ ಬಿರಹಾನು ಟಾಪ್ಸಿ ಹೇಳಿದರು.

ಮಂಗಳವಾರ ಧರ್ಮಸ್ಥಳದ ಪ್ರೌಢಶಾಲಾ ಆವರಣದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಆಯೋಜಿಸಿದ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಕೈಗೊಂಡಿರುವ ಮಹಿಳಾ ಸಬಲೀಕರಣ, ಆರ್ಥಿಕ ಒಳಗೊಳ್ಳುವಿಕೆ, ಸ್ವ-ಉದ್ಯೋಗ ತರಬೇತಿ, ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯ ಕಾರ್ಯಗಳನ್ನು ಟಾಪ್ಸಿ ಶ್ಲಾಘಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ‘ಲಕ್ಷದೀಪೋತ್ಸವ ಎಲ್ಲರ ಮನೆ, ಮನಗಳನ್ನು ಬೆಳಗಿಸುವ ಪವಿತ್ರ ಸಮಾರಂಭ. ಅಪಾರ ಸಂಖ್ಯೆಯ ಜನರು ಸರ್ವಧರ್ಮ ಸಮ್ಮೇಳನ, ಸಾಹಿತ್ಯ ಸಮ್ಮೇಳನ, ವಸ್ತುಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಾರೆ’ ಎಂದರು.

ಮಾಹಿತಿ ಕಣಜ: ವಸ್ತುಪ್ರದರ್ಶನದಲ್ಲಿ 350ಕ್ಕೂ ಹೆಚ್ಚು ಮಳಿಗೆಗಳಿದ್ದು, ಅಪೂರ್ವ ಮಾಹಿತಿ, ಮಾರ್ಗದರ್ಶನದ ಕಣಜವಾಗಿದೆ. ಕೃಷಿ, ಹೈನುಗಾರಿಕೆ, ಬ್ಯಾಂಕಿಂಗ್, ತೋಟಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಹಾಗೂ ಮಹಿಳಾ ಕಲ್ಯಾಣ ಇಲಾಖೆ, ಜೀವ ವಿಮೆ, ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಡಿಕೆ ಹಾಳೆತಟ್ಟೆ ತಯಾರಿ, ಮಡಕೆ ತಯಾರಿ, ಗ್ರಾಮೀಣ ಕರಕುಶಲ ಕಲೆಗಳ ಮಳಿಗೆಗಳು ಜನರನ್ನು ಆಕರ್ಷಿಸುತ್ತಿವೆ.

ನ.30ರವರೆಗೆ ಪ್ರತಿದಿನ ಬೆಳಿಗ್ಗೆ 9ರಿಂದ ರಾತ್ರಿ 10ವರೆಗೆ ವಸ್ತುಪ್ರದರ್ಶನ ವೀಕ್ಷಣೆಗೆ ಅವಕಾಶವಿದೆ. ಪ್ರತಿದಿನ ಸಂಜೆ 6 ಗಂಟೆಯಿಂದ ವಸ್ತುಪ್ರದರ್ಶನ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕರ್ಣಾಟಕ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ರಾಜಾ ಬಿ.ಎಸ್, ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲ ಕುಮಾರ ಹೆಗ್ಡೆ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಪಿ. ವಿಶ್ವನಾಥ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಮಹೇಶ್ಕುಮಾರ್ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ಕುಮಾರ್, ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ಎನ್. ಜನಾರ್ದನ್, ಎಸ್ಡಿಎಂ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ. ಜನಾರ್ದನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.