ಮೂಡುಬಿದಿರೆ: ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 400 ಮೀಟರ್ ಹರ್ಡಲ್ಸ್ ಅನ್ನು 48.96 ಸೆಕೆಂಡ್ಗಳಲ್ಲಿ ಕ್ರಮಿಸಿ ಬೆಳ್ಳಿ ಪದಕ ಪಡೆದ ಧಾರುಣ್ ಅಯ್ಯಸ್ವಾಮಿ ಮೂಡುಬಿದಿರೆ ಆಳ್ವಾಸ್ನ ತೃತೀಯ ಬಿಎಚ್ಆರ್ಡಿ ವಿದ್ಯಾರ್ಥಿಯಾಗಿದ್ದಾರೆ.

ಧಾರುಣ್ 2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್ ಹಾಗೂ 2017ರಲ್ಲಿ ಆಸ್ಟ್ರೇಲಿಯದಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಸಾಧನೆ ಮಾಡಿದ್ದಾರೆ. ಆಳ್ವಾಸ್ ಕಾಲೇಜಿನ ಕ್ರೀಡಾ ದತ್ತು ಯೋಜನೆಯಡಿ ಉಚಿತ ವ್ಯಾಸಂಗ ಮಾಡುತ್ತಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ 400 ಮೀಟರ್ ಹರ್ಡಲ್ಸ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಅಖಿಲ ಭಾರತ ಅಥ್ಲೆಟಿಕ್ ಚಾಂಪಿಯನ್ ಶಿಪ್ನಲ್ಲಿ ಮೂರು ಬಾರಿ ಚಿನ್ನ ಹಾಗೂ ಕೂಟ ದಾಖಲೆಯ ಸಾಧನೆ ಮಾಡಿದ್ದಾರೆ. ವಿಶ್ವವಿದ್ಯಾಲಯ ₹1ಲಕ್ಷ ನಗದು ಬಹುಮಾನ ನೀಡಿ ಗೌರವಿಸಿತ್ತು. ಧಾರುಣ್ ಸಾಧನೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.